ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಜನಜಾಗೃತಿ ಯಾತ್ರೆ ಅಗತ್ಯ
A public awareness campaign is essential for building a society grounded in good values
ಲೋಕದರ್ಶನ ವರದಿ
ಜಮಖಂಡಿ 2: ಇಂದಿನ ಪೀಳಿಗೆಗೆ ಪಸ್ಣ್ಘಹ್ಝ್ತಿಸ್ಣ್ಘ, ಸಂಸ್ಕಾರ ಮತ್ತು ಸಂಸ್ಕೃತಿಯ ಕುರಿತು ಆಧ್ಯಾತ್ಮಿಕ ಜಾಗೃತಿ ಮೂಡಿಸಲು ಜನಜಾಗೃತಿ ಯಾತ್ರೆಗಳು ಅಗತ್ಯವೆಂದು ಓಲೆಮಠದ ಆನಂದ ದೇವರು ಹೇಳಿದರು. ತಾಲೂಕಿನ ಜಂಬಗಿ ಕೆಡಿ ಗ್ರಾಮದಲ್ಲಿ ಓಲೆಮಠದ ಆಶ್ರಯದಲ್ಲಿ ವ್ಯಸನಮುಕ್ತ ಗ್ರಾಮ ನಿರ್ಮಾಣ ಹಾಗೂ ದುಶ್ಚಟಗಳ ನಿರ್ಮೂಲನೆ ಕುರಿತು ಐದು ದಿನಗಳ ಕಾಲ ನಡೆದ ಜನಜಾಗೃತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ಮಾನವ ಜೀವನವನ್ನು ಸಾರ್ಥಕಗೊಳಿಸುವ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಭಗವಂತನು ನೀಡಿರುವ ಭೂಮಿ, ನೀರು ಮತ್ತು ಪ್ರಕೃತಿ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ನಡೆಸಬೇಕು. ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳದೆ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ರುಂಜರವಾಡದ ಬಸವರಾಜೇಂದ್ರ ಶರಣರು ಪ್ರವಚನ ನೀಡಿ, ಸದ್ಗುರುವಿನ ಮಾರ್ಗದರ್ಶನದಲ್ಲಿ ಸನ್ಮಾರ್ಗದಲ್ಲಿ ಸಾಗಿದರೆ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಓಲೆಮಠದ ಲಿಂ. ಡಾ. ಅಭಿನವಕುಮಾರ ಚೆನ್ನಬಸವ ಮಹಾಸ್ವಾಮೀಜಿಗಳ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಆಧ್ಯಾತ್ಮಿಕ, ಧಾರ್ಮಿಕ, ಸಾಹಿತ್ಯ ಹಾಗೂ ಶೈಕ್ಷಣಿಕ ಸೇವೆಯನ್ನು ಸ್ಮರಿಸಲಾಯಿತು. ಶೂರ್ಾಲಿಯ ಸಂಗಯ್ಯ ಸ್ವಾಮೀಜಿ, ಟಕ್ಕಳಕಿಯ ರುದ್ರಯ್ಯ ಹಿರೇಮಠ, ಜಂಬಗಿ ಕೆಡಿಯ ಬಸಯ್ಯ ಮಠಪತಿ, ಈರಯ್ಯ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಬಸವೇಶ್ವರ ಭಜನಾ ಸಂಘದ ಕಲಾವಿದರು ಸಂಗೀತ ಸೇವೆ ಸಲ್ಲಿಸಿದರು.
ಇದಕ್ಕೂ ಮುನ್ನ ಮಹಿಳೆಯರು ಗ್ರಾಮದಲ್ಲಿ ರೊಟ್ಟಿಬುತ್ತಿ ಯಾತ್ರೆಯನ್ನು ಭಕ್ತಿ ಮತ್ತು ಸಂಭ್ರಮದಿಂದ ನಡೆಸಿದರು. ಕರಿಮ್ಮದೇವಿ ಡೊಳ್ಳಿನ ಸಂಘದ ಕಲಾವಿದರು ಡೊಳ್ಳು ಕುಣಿತ ಪ್ರದರ್ಶಿಸಿ ಯಾತ್ರೆಗೆ ಮೆರುಗು ತಂದರು. ಮುಂದಿನ ಐದು ದಿನಗಳ ಜನಜಾಗೃತಿ ಕಾರ್ಯಕ್ರಮಕ್ಕಾಗಿ ಅಥಣಿ ತಾಲೂಕಿನ ರುಂಜರವಾಡ ಗ್ರಾಮದ ಸದ್ಭಕ್ತರಿಗೆ ಜನಜಾಗೃತಿ ಜ್ಯೋತಿಯನ್ನು ಹಸ್ತಾಂತರಿಸಲಾಯಿತು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 