ಸ್ಮಾರ್ಟ್ ಸಿಟಿಯಾಗಿಸಲು ವಿಶೇಷ ಕ್ರಮ- ಹುಕ್ಕೇರೀವೀರ ಸಾವರಕರ ನಗರದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ
ಚಿಕ್ಕೋಡಿ 26 : ಜಿಲ್ಲಾ ಸ್ಥಾನಮಾನ ಹೊಂದಿರುವ ಚಿಕ್ಕೋಡಿ ನಗರವನ್ನು ಸ್ಮಾರ್ಟ್ ಸೀಟಿಯನ್ನಾಗಿ ಮಾಡಲು ಸಂಕಲ್ಪ ಇಟ್ಟುಕೊಂಡಿದ್ದು. ಬುಂಬರುವ ದಿನಗಳಲ್ಲಿ ಹಂತ ಹಂತವಾಗಿ ಚಿಕ್ಕೋಡಿಯಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು.ಇಲ್ಲಿನ ವೀರ ಸಾವರ್ಕರ್ ನಗರದಲ್ಲಿ 28 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಪಟ್ಟಣದ ಅಭಿವೃದ್ಧಿಗೆ ನನ್ನ ಹಾಗೂ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಅಣ್ಣಾ ಹುಕ್ಕೇರಿ ಅವರ ಪ್ರಯತ್ನದಿಂದ 4 ಕೋಟಿ ರೂಪಾಯಿ ವಿಶೇಷ ಅನುದಾನ ಮಂಜೂರಾಗಿದ್ದು, ಗಣರಾಜ್ಯೋತ್ಸವದ ನಿಮಿತ್ಯ ಪ್ರಥಮವಾಗಿ ವೀರ ಸಾವರಕರ ನಗರದಲ್ಲಿ 28 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಾನು ಭೂಮಿ ಪೂಜೆ ನೆರವೇರಿಸಿದ್ದೇನೆ ಎಂದರು.ಈ ರಸ್ತೆ ಅಭಿವೃದ್ಧಿಯ ಮೂಲಕ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರ ಸೌಲಭ್ಯ ಒದಗುವುದು ಹಾಗೂ ಪ್ರದೇಶದ ಮೂಲಭೂತ ಸೌಕರ್ಯ ಸುಧಾರಣೆಗೆ ಸಹಕಾರಿಯಾಗುವುದು. ನಾಗರಿಕರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಪ್ರಾಮುಖ್ಯತೆ ನೀಡುವುದು ನಮ್ಮ ಮುಖ್ಯ ಉದ್ದೇಶ. ಈ ಕಾಮಗಾರಿ ಶೀಘ್ರ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ವೀಣಾ ಕವಟಗಿಮಠ. ಮಾಜಿ ಅಧ್ಯಕ್ಷ ಪ್ರವೀಣ ಕಾಂಬಳೆ. ಉಪಾಧ್ಯಕ್ಷ ಇರ್ಾನ ಬೇಪಾರಿ. ಪುರಸಭೆ ಸದಸ್ಯರಾದ ರಾಮಾ ಮಾನೆ.ಗುಲಾಬ ಬಾಗವಾನ. ಅನೀಲ ಮಾನೆ. ಡಾ.ಅಜೀತ ಚರಾಟೆ. ಅಜಯ ಕವಟಗಿಮಠ ಮುಂತಾದವರು ಇದ್ದರು.ಪೋಟೋ: ಚಿಕ್ಕೋಡಿ: ಪಟ್ಟಣದ ವೀರ ಸಾವರ್ಕರ ನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ ನೀಡಿದರು.