ರಾಜ್ಯಮಟ್ಟದ ಪ್ರಶಸ್ತಿಯಾಗಿದ್ದು ಎಲ್ಲಾ ಆವೃತ್ತಿಗಳಲ್ಲಿ ಅಂಕಿತ ಪುಸ್ತಕಕ್ಕೆ ಬೆರಗು
A state-level award for a signed book in all editions
ಆಲಮೇಲ 20: ತಾಲ್ಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆ ನೀಡುವ 2026 ರ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ.ಮಾಜಿಸಚಿವ ದಿ. ಎಂ.ಸಿ.ಮನಗೂಳಿ ಸ್ಮರಣಾರ್ಥ ನೀಡಲಾಗುವ ’ಕರುನಾಡಿನ ಅತ್ಯುತ್ತಮ ಪ್ರಕಾಶನ’ ಪ್ರಶಸ್ತಿಯನ್ನು ಬೆಂಗಳೂರಿನ ಅಂಕಿತ ಪುಸ್ತಕ ಪ್ರಕಾಶನ ಆಯ್ಕೆಯಾಗಿದ್ದು ರೂ.25ಸಾವಿರ ನಗದು, ಪ್ರಶಸ್ತಿಫಲಕ ಒಳಗೊಂಡಿದೆ. ಅಂಕಿತ ಪ್ರಕಾಶನವು ಕಳೆದ 30ವರ್ಷಗಳಲ್ಲಿ ಸಾವಿರಪುಸ್ತಕಗಳನ್ನು ಪ್ರಕಟಿಸಿದ್ದು ಬಹುದೊಡ್ಡ ಸಾಧನೆಯನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿಗೆ ಕಲಬುರಗಿಯ ಹಿರಿಯ ಸಾಹಿತಿ ಡಾ.ಶ್ರೀಶೈಲ ನಾಗರಾಳ ಅವರಿಗೆ ನೀಡಲು ತೀರ್ಮಾನಿಸಿದ್ದು ಪ್ರಶಸ್ತಿಯು ಹತ್ತು ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದ್ದು, ಫೆಬ್ರವರಿ ಮೊದಲ ವಾರದದಲ್ಲಿ ಕಡಣಿಯಲ್ಲಿ ನಡೆಯುವ 9ನೇ ವರ್ಷದ ಸಂಭ್ರಮ ಹಾಗೂ 25 ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಆರ್. ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 