ವಿಜಯಪುರ 15: ಜಿಲ್ಲೆಯಲ್ಲಿರುವ ಸಫಾಯಿ ಕರ್ಮಚಾರಿಗಳ ಸಮೀಕ್ಷೆ ನಡೆಸಿ ಬರುವ ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಜಗದೀಶ ಹಿರೇಮನಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿರುವ ಎಲ್ಲ ಸಫಾಯಿ ಕರ್ಮಚಾರಿಗಳ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ಹಮ್ಮಿಕೊಂಡಲ್ಲಿ ಕೇಂದ್ರ ಸಕರ್ಾರದ ವಿವಿಧ ಯೋಜನೆಗಳಡಿಯಲ್ಲಿ ಸೌಲಭ್ಯ ದೊರಕಿಸಲು ಸಹಾಯವಾಗಲಿದೆ. ಅದರಂತೆ ಕೇಂದ್ರ ಸಕರ್ಾರವು ಪೈಲಟ್ ಯೋಜನೆಯಾಗಿ ಕನರ್ಾಟಕ ರಾಜ್ಯದ ಒಟ್ಟು 11 ಜಿಲ್ಲೆಗಳಲ್ಲಿ ಮಲಹೊರುವ (ಮ್ಯಾನುವೆಲ್ ಸ್ಕ್ಯಾವೆಂಜರ್) ಪದ್ಧತಿ ಜಾರಿಯಲ್ಲಿರುವುದರಿಂದ ಗಮನಕ್ಕೆ ಬಂದಿದ್ದು, ಈ ಪದ್ಧತಿ ಸಂಪೂರ್ಣ ನಿಮರ್ೂಲನೆಗಾಗಿ ಎಲ್ಲ ಸಫಾಯಿ ಕರ್ಮಚಾರಿಗಳ ಅಧಿಕೃತ ದತ್ತಾಂಶ ಲಭ್ಯವಿರಬೇಕಾದ ಹಿನ್ನಲೆಯಲ್ಲಿ ಬರುವ ಜುಲೈ ಅಂತ್ಯದೊಳಗೆ ಈ ಸಮೀಕ್ಷೆ ಕಾರ್ಯಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಫಾಯಿ ಕರ್ಮಚಾರಿಗಳ ಆಥರ್ಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸುವ ಜೊತೆಗೆ ಸಮಾಜದ ಮುಖ್ಯವಾಹಿನಿಗೆ ತರುವ ಅವಶ್ಯಕತೆ ಇದೆ. ಸಫಾಯಿ ಕರ್ಮಚಾರಿಗಳ ಕೌಟುಂಬಿಕ ಪರಿಸ್ಥಿತಿಯನ್ನು ಸುಧಾರಿಸಲು ಅನುಕೂಲವಾಗುವಂತೆ ಅವರಿಗೆ ಉದ್ಯೋಗಾವಕಾಶ, ಪುನರವಸತಿ, ಆರೋಗ್ಯ ವ್ಯವಸ್ಥೆ ಹಾಗೂ ಕುಟುಂಬದ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ತಲುಪಿಸುವ ಅಗತ್ಯವಿದ್ದು, ಈ ದಿಸೆಯಲ್ಲಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಿ ಅವರ ಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲೆಯಾದ್ಯಂತ ಮ್ಯಾನುವಲ್ ಸ್ಕ್ಯಾವೆಂಜರ್ ಪದ್ಧತಿಯು 2013ರ ಎಂಎಸ್ ಕಾಯ್ದೆಯನ್ವಯ ಸಂಪೂರ್ಣ ನಿಷೇಧವಾಗಬೇಕಾಗಿದ್ದು, ಅಧಿಕಾರಿಗಳಾಗಲಿ, ಅಥವಾ ಸಾರ್ವಜನಿಕರಾಗಲಿ ಮ್ಯಾನುವೆಲ್ ಸ್ಕ್ಯಾವೆಂಜರ್ಗಳನ್ನು ಬಳಸಬಾರದೆಂದು ತಿಳಿಸಿದ ಅವರು, ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಲಾಗುತ್ತದೆ. ಅದರಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೌಚ ಸ್ವಚ್ಛತೆಗೆ ಯಂತ್ರಗಳನ್ನು ಬಳಸುವಂತೆ ತಿಳಿಸಿದ ಅವರು, ಮ್ಯಾನುವೆಲ್ ಸ್ಕ್ಯಾವೆಂಜರ್ ಕೆಲಸಕ್ಕೆ ಬಳಸದಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇಂತಹ ವೃತ್ತಿಯನ್ನು ಕೈಬಿಡಲು ಕೇಂದ್ರ ಸಕರ್ಾರವು ಅನೇಕ ಪ್ರೋತ್ಸಾಹಕ ಯೋಜನೆಗಳನ್ನು ಜಾರಿಗೊಳಿಸಿದೆ. ನೇರವಾಗಿ ಸಫಾಯಿ ಕರ್ಮಚಾರಿಗಳ ಖಾತೆಗೆ 40 ಸಾವಿರ ರೂ. ಜಮೆ ಮಾಡುವ ಯೋಜನೆ ಜಾರಿಯಲ್ಲಿದೆ. 20 ಸಾವಿರ ರೂ.ಗಳಿಂದ 20 ಲಕ್ಷ ರೂ.ದವರೆಗೆ ಹಣಕಾಸು ನೆರವು ಒದಗಿಸುವ ಯೋಜನೆ ಸಹ ಜಾರಿಯಲ್ಲಿದ್ದು, ಪಯರ್ಾಯ ಉದ್ಯೋಗಳಿಗೂ ಅವಕಾಶವಿದೆ ಎಂದು ಹೇಳಿದರು.
ಈಗಾಗಲೇ ಮಲಹೊರುವ ಪದ್ಧತಿಯನ್ನು ನಿಷೇಧಿಸಲಾಗಿದೆ. ಈ ಹಿನ್ನಲೆಯಲ್ಲಿ ಇಂತಹ ಕೆಲಸದಲ್ಲಿ ತೊಡಗಿರುವವರನ್ನು ಗುರುತಿಸಿ ಪಯರ್ಾಯ ಉದ್ಯೋಗ, ಅವಶ್ಯಕ ಮನೆಗಳ ಸೌಲಭ್ಯ, ಜೀವನ ಭದ್ರತೆಗೆ ರಕ್ಷಣೆ ನೀಡುವಂತೆಯೂ ಸಲಹೆ ನೀಡಿದ ಅವರು, ಒಟ್ಟಾರೆ ಈ ಪದ್ಧತಿ ಜಾರಿಯಲ್ಲಿ ಇರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿ, ರಾಷ್ಟ್ರೀಯ ಆಯೋಗವು ಸಕರ್ಾರಿ, ಅರೆ-ಸಕರ್ಾರಿ ಹಾಗೂ ಖಾಸಗಿ ವಲಯಗಳಲ್ಲಿ ಇಂತಹ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವವರನ್ನು ಗುರುತಿಸುವ ಅಂಗವಾಗಿ ಸಮೀಕ್ಷೆ ಕಾರ್ಯ ಕೈಗೊಳ್ಳಲು ಸೂಚಿಸಲಾಗಿದ್ದು, ಈ ಕುರಿತಂತೆ ಎಲ್ಲ ರಾಜ್ಯಗಳ ರಾಜ್ಯ ಸಕರ್ಾರಗಳಿಗೂ ನಿದರ್ೇಶನ ಸಹ ನೀಡಲಾಗುತ್ತದೆ ಎಂದು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮಾತನಾಡಿ, ಜಿಲ್ಲೆಯಲ್ಲಿ ಮಲಹೊರುವ ಪದ್ಧತಿ ನಿಮರ್ೂಲನೆಗೆ ಅವಶ್ಯಕ ಕ್ರಮ ಕೈಗೊಳ್ಳಲಾಗುವುದು. ಈ ಕೆಲಸದಲ್ಲಿ ತೊಡಗಿರುವವರನ್ನು ಗುರುತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಸಹ ನೀಡಲಾಗುವುದು. ವಿವಿಧ ಯಂತ್ರಗಳ ಮೂಲಕ ಸ್ವಚ್ಛತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವುದಾಗಿ ಸಭೆಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ ಅವರು ಮಾತನಾಡಿ, ಜಿಲ್ಲೆಯಲ್ಲಿರುವ ಪ್ರತಿ ಕುಟುಂಬಗಳ ತಾಲೂಕಾವಾರು ಮಾಹಿತಿ, ಅವರು ಬಳಸುತ್ತಿರುವ ಶೌಚಗಳ ಶೌಚಗುಂಡಿ ಬಗ್ಗೆಯೂ ಪರಿಶೀಲನೆ ನಡೆಸಬೇಕು. ತಾಂತ್ರಿಕವಾಗಿ ಸಮಗ್ರ ಅಧ್ಯಯನ ನಡೆಸಿ, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಇಂಡಿ ನಗರದ ಹೊಟೆಲ್ವೊಂದರ ಶೌಚ ಸ್ವಚ್ಛತೆಗೆ ಇಳಿದು ಸಾವನ್ನಪ್ಪಿದ ಕರ್ಮಚಾರಿಗಳ ವಾರಸುದಾರರಿಗೆ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಹೊಟೆಲ್ ಮಾಲೀಕರಿಂದ ಪರಿಹಾರ ಒದಗಿಸುವ ಕುರಿತು ಹಾಗೂ ತಪ್ಪಿತಸ್ಥರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಅದರಂತೆ ಇಂದು ತಾವೂ ಸಹ ಇಂಡಿ ನಗರಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಉಪಸ್ಥಿತರಿದ್ದರು. ಇಂಡಿ ತಾಲೂಕಾ ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿ ಬಿ.ಜೆ.ಇಂಡಿ ಅವರು ಸ್ವಾಗತಿಸಿದರು.