ಕೃಷಿ ಪರಿಕರ ಮಳಿಗೆಗಳಿಗೆ ಕೃಷಿ ಇಲಾಖೆ ಅಧಿಕಾರಿಗಳ ತಂಡ ಭೇಟಿ
A team of Agriculture Department officials visited agricultural implement stores.
ಕೃಷಿ ಪರಿಕರ ಮಳಿಗೆಗಳಿಗೆ ಕೃಷಿ ಇಲಾಖೆ ಅಧಿಕಾರಿಗಳ ತಂಡ ಭೇಟಿ
ಯರಗಟ್ಟಿ, 02 : ಪಟ್ಟಣದ ವಿವಿಧ ಕೃಷಿ ಪರಿಕರ ಮಳಿಗೆಗಳಿಗೆ ಕೃಷಿ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ದಾಖಲೆಗಳನ್ನು ಪರೀಶೀಲಿಸಿ ಇವರಿಗೆ ರಸಗೊಬ್ಬರವನ್ನು ರೈತರಿಗೆ ನಿಗದಿತ ದರದಲ್ಲಿ ವಿತರಣೆ ಮಾಡಬೇಕು ಯಾವುದೇ ಕಾರಣಕ್ಕೂ ಕೃತಕಪವನ್ನು ಸೃಷ್ಟಿಸಬಾರದು ಎಂದು ಅಂಗಡಿಗೆ ಮಾಲೀಕರಿಗೆ ಎಚ್ಚರಿಸಿದರು.
ಬೆಳಗಾವಿ ಕೃಷಿ ಇಲಾಖೆಯಿಂದ ಆಗಮಿಸಿದ ಸಿ. ಐ. ಹೂಗಾರ ಇವರು ಮಾತನಾಡಿ ಯೂರಿಯಾ ಬಳಕೆಯಿಂದ ಮಾನವನ ಆರೋಗ್ಯ, ಮಣ್ಣು, ಬೆಳೆಯ ಆರೋಗ್ಯ ಮತ್ತು ಪರಿಸರದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ರೈತರಿಗೆ ತಿಳಿಸಿದರು. ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ ಪಾಟೀಲ ರೈತರಿಗೆ ಯೂರಿಯಾ ಗೊಬ್ಬರದ ಅತಿ ಬಳಕೆಯಿಂದ ಆಗುವ ಹಾನಿಕಾರಕ ಪರಿಣಾಮಗಳನ್ನು ಅರಿತು ರೈತರು ಮುಂದಿನ ಪೀಳಿಗೆಗಾಗಿ ಉತ್ತಮ ಫಲವತ್ತಾರ ಭೂಮಿಯನ್ನು ಉಳಿಸಲು ಯೂರಿಯಾ ಗೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಗೊಬ್ಬರವನ್ನು ಬಳಸಲು ಸಲಹೆ ನೀಡಿದರು.ಬಿತ್ತನೆ ಸಮಯದಲ್ಲಿ ರೈತರಿಂದ ಬೇಡಿಕೆ ಹೆಚ್ಚಾದ ಸಮಯದಲ್ಲಿ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡಿದರೆ ಸಹಿಸುವುದಿಲ್ಲ, ಅಂಗಡಿಕಾರರು ಸರ್ಕಾರ ನಿಗಧಿ ಮಾಡಿದ ಎಂಆರ್‌ಪಿ ದರದಲ್ಲಿ ಬೀಜ ಹಾಗೂ ಗೊಬ್ಬರ ಮಾರಾಟ ಮಾಡಬೇಕು, ನಕಲಿ ಬೀಜ ಮಾರಾಟ ಕಂಡು ಬಂದಲ್ಲಿ ಲೈಸನ್ಸ್ ರದ್ದು ಪಡಿಸಲಾಗುವುದು ಎಂದು ಎಚ್ಚರಿಸಿದರು. ತಾಲೂಕಿನಲ್ಲಿ ರಸಗೊಬ್ಬರ, ಕೀಟನಾಶಕ ಹಾಗೂ ಬಿತ್ತನೆ ಬೀಜ ಅಧಿನಿಯಮದಡಿ ಯಾವುದೇ ಕೃಷಿ ಪರಿಕರ ಮಾರಾಟಗಾರರು ಕಾನೂನು ಉಲ್ಲಂಘನೆ ಮಾಡಿದಲ್ಲಿ ರೈತರು ಸಮೀಪದ ಕೃಷಿ ಅಧಿಕಾರಿ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಿ ದೂರು ನೀಡಬಹುದು, ಎಂದು ರಾಜಸುಲ ತಿಳಿಸಿದರು.
ಈ ವೇಳೆ ಕೃಷಿ ಅಧಿಕಾರಿ ಎಂ ಜಿ. ಕಳಸಪ್ಪನವರ, ಎಸ್. ಎಲ್. ದೇಸಾಯಿ, ಉಮೇಶ ಯರಗಟ್ಟಿ, ಶ್ರವಣ, ಶಿವಪೂಜಿ ಇದ್ದರು.ಹೇಳಿಕೆ:
ತಾಲೂಕಿನಲ್ಲಿ ರೈತರಿಗೆ ಸಾಕಾಗುವಷ್ಟು ಯೂರಿಯಾ, ರಸಗೊಬ್ಬರ ನಮ್ಮಲ್ಲಿ ದಾಸ್ತಾನಿದೆ, ತಾಲೂಕಿಗೆ ಸಾಕಾಗುವಷ್ಟು ಪೂರಸಲಾಗುತ್ತಿದ್ದು ರೈತರು ಆತಂಕ ಪಡಬೇಕಿಲ್ಲ, ಗೊಬ್ಬರ ಕೊಂಡುಕೊಳ್ಳುವಾಗ ರೈತರು ಅಂಗಡಿಗೆ ತೆರಳುವಾಗ ಕಡ್ಡಾಯವಾಗಿ ಅವರ ಆಧಾರ್ ನಂಬರ್ ಕೊಟ್ಟು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಬೇಕು. ಅಂಗಡಿಗಳ ಮೇಲೆ ಅನೀರೀಕ್ಷಿತ ದಾಳಿ ಮುಂದುವರಿಯಲಿದೆ.ಶಿವಪ್ರಕಾಶ ಪಾಟೀಲ ಕೃಷಿ ಸಹಾಯಕ ನಿರ್ದೇಶಕರು, ಸವದತ್ತಿ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 