ಇಂದು ವಿಜಯಪುರದಲ್ಲಿ ವಾಲಿಬಾಲ್ ಕ್ರೀಡೆ ಕುರಿತು ಮೂರು ದಿನಗಳ ಕಾರ್ಯಾಗಾರ

A three-day workshop on the sport of volleyball in Vijayapur today

ಇಂದು ವಿಜಯಪುರದಲ್ಲಿ ವಾಲಿಬಾಲ್ ಕ್ರೀಡೆ ಕುರಿತು ಮೂರು ದಿನಗಳ ಕಾರ್ಯಾಗಾರ  

ವಿಜಯಪುರ 02: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ವಾಲಿಬಾಲ್ ಕ್ರೀಡೆಯ ಕುರಿತು ಮೂರು ದಿನಗಳ ಕಾರ್ಯಾಗಾರ ಮತ್ತು ನಿರ್ಣಾಯಕರ ಪರೀಕ್ಷೆ ಉದ್ಘಾಟನಾ ಸಮಾರಂಭವನ್ನು ಇದೇ ದಿ.3 ರಂದು ಬೆಳಿಗ್ಗೆ 11:00 ಗಂಟೆಗೆ ವಿವಿಯ ಕನ್ನಡ ಅಧ್ಯಯನ ಭವನದಲ್ಲಿ ಆಯೋಜಿಸಲಾಗಿದೆ. 

ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕರ್ನಾಟಕ ವಾಲಿಬಾಲ್ ಸಂಸ್ಥೆಯ ಉಪಾಧ್ಯಕ್ಷ ಭೀಮಸೇನ ಕೊಕರೆ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ವಹಿಸಲಿದ್ದಾರೆ. ಅತಿಥಿಗಳಾಗಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್‌.ಎಂ.ಚಂದ್ರಶೇಖರ ಭಾಗವಹಿಸಲಿದ್ದು, ಪ್ರೊ.ಡಿ.ಎಂ.ಜ್ಯೋತಿ, ಪ್ರೊ.ರಾಜಕುಮಾರ ಮಾಲಿಪಾಟೀಲ, ಪ್ರೊ. ಶ್ರೀನಿವಾಸ, ಪ್ರೊ.ಜ್ಯೋತಿ ಉಪಾದ್ಯೆ, ಡಾ.ಕಿರಣ ಜಿ.ಎನ್, ಡಾಅಶ್ವಿನಿ ಕೆ, ಎನ್, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಹನುಮಂತಯ್ಯ ಪೂಜಾರ, ಸಹ ನಿರ್ದೇಶಕ ವಿಶ್ವನಾಥ ನಡಕಟ್ಟಿ ಮತ್ತು ಶಿಕ್ಷಣ ನಿಕಾಯ ಡೀನ ಪ್ರೊ.ಸಕ್ಪಾಲ್ ಹೂವಣ್ಣ ಉಪಸ್ಥಿತಲಿರಲಿದ್ದಾರೆ. 

ಸಮಾರೋಪ ಸಮಾರಂಭ: ಇದೇ ಫೆ.05 ರಂದು ಮಧ್ಯಾಹ್ನ 03:00 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಅಂತರಾಷ್ಟ್ರೀಯ ಕ್ರೀಡಾಪಟು ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ಬಾಲಾಜಿ ಪ್ರಭು ಭಾಗವಹಿಸಲಿದ್ದು,  ಅಧ್ಯಕ್ಷತೆಯನ್ನು ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ವಹಿಸಲಿದ್ದಾರೆ. ಅತಿಥಿಗಳಾಗಿ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್‌.ಎಂ.ಚಂದ್ರಶೇಖರ ವಹಿಸಲಿದ್ದು ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ವಾಲಿಬಾಲ್ ತರಬೇತಿದಾರ ರಾಜೇಶ್ ಪತ್ತಾರ ಹಾಗೂ ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ಮತ್ತು ತೀರ​‍್ುಗಾರರ ಮಂಡಳಿಯ ಸಂಚಾಲಕ ಕೆ.ವೆಂಕಟೇಶ್‌ಗೌಡ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಲಾಗಿದೆ.