ನಕಲಿ ಪಿಎಚ್‌ಡಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
ABVP protests demanding action against fake PhDs
ಬೆಳಗಾವಿ 19: ನಕಲಿ ಪಿಎಚ್‌ಡಿ ವಿರುದ್ಧ ಕ್ರಮ ಕೈಗೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಅಧ್ಯಾಪಕರ, ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಿಸಿದರು.
ಮನವಿಯಲ್ಲಿ ರಾಜ್ಯದ ಜಮಖಂಡಿ, ಹಾವೇರಿ, ಯಾದಗಿರಿ, ಸೇರಿದಂತೆ ಅನೇಕ ಜಿಲ್ಲೆಗಳ ವಿವಿಧ ಸರ್ಕಾರಿ ಅನುದಾನಿತ ಕಾಲೇಜುಗಳಲ್ಲಿ ನಕಲಿ ಪಿಎಚ್‌ಡಿ ಪದವಿಗಳನ್ನು ಹೊಂದಿರುವ ವ್ಯಕ್ತಿಗಳು ಅತಿಥಿ ಉಪನ್ಯಾಸಕರಾಗಿ, ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ಆರೋಪಗಳು ಅನೇಕ ದಿನಗಳಿಂದ ಕಂಡು ಬರುತ್ತದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗುವುದಲ್ಲದೆ ಶಿಕ್ಷಣದ ಗುಣಮಟ್ಟಕ್ಕೂ ಕಳಂಕ ತರುವಂತಹ ಸಂಗತಿಯಾಗಿದೆ.
ಇಂತಹ ನಕಲಿ ಪಿಎಚ್‌ಡಿ ಪದವಿ ಹೊಂದಿದ ವ್ಯಕ್ತಿಗಳು ಸಿಕ್ಕಿ ಬೀಳುವ ಭಯದಿಂದ ರಾಜೀನಾಮೆಯನ್ನು ನೀಡಿ ಪಾರಾಗುತ್ತಿದ್ದಾರೆ. ಇಂಥವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಅಭಾವಿಪ ಖಂಡಿಸುತ್ತದೆ. ಅರ್ಹ ಅಭ್ಯರ್ಥಿಗಳಿಗೂ ಅನ್ಯಾಯವಾಗುತ್ತದೆ. ಆದ್ದರಿಂದ ಇಂಥ ನಕಲಿ ಪಿಎಚ್‌ಡಿ ಪದವಿ ಜಾಲವನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಭಾವಿಪ ಆಗ್ರಹಿಸಿದೆ.
ರಾಜ್ಯದ ಬಹುತೇಕ ವಿವಿಗಳು, ಸರ್ಕಾರಿ ಕಾಲೇಜುಗಳು ಸೇರಿದಂತೆ ಹಲವಾರು ಕಾಲೇಜುಗಳಲ್ಲಿ ಅಧ್ಯಾಪಕರ ಮತ್ತು ಶಿಕ್ಷಕರ ಹುದ್ದೆಗಳು ಖಾಲಿ ಇದ್ದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೊಡೆತ ಬೀಳುತ್ತಿದೆ. ರಾಜ್ಯದ 32 ವಿವಿಗಳಲ್ಲಿ 9292 ಬೋದಕ ಬೋಧಕೇತರ ಹುದ್ದೆಗಳು, ಐದು ಉಪಕುಲಪತಿಗಳ ಹುದ್ದೆಗಳು ಭರ್ತಿ ಆಗದೆ ಹಾಗೆ ಉಳಿದಿವೆ. ಆದ್ದರಿಂದ ಈ ಹುದ್ದೆಗಳನ್ನು ತುಂಬಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಮುಂದಾಗಬೇಕು. ಸರಿಯಾಗಿ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 