ಸರ್ಕಾರಿ ಶಾಲೆ ಮುಚ್ಚುವುದಿಲ್ಲವೆಂದು ಸರ್ಕಾರ ಆದೇಶ ಹೊರಡಿಸಲಿ-ಎಐಡಿಎಸ್‌ಓ ಆಗ್ರಹ
AIDSSO demands that the government issue an order not to close government schools
ಕೊಪ್ಪಳ 09: ಸೋಮವಾರ ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರ್ಪ ರವರು, ಸರ್ಕಾರಿ ಶಾಲೆ ಮುಚ್ಚುವುದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ, ಈ ರೀತಿಯ ಅಪಾದನೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿರುವ ಅಸತ್ಯದಿಂದ ಕೂಡಿದ ವಾದ ಎಂದೂ ಸಹ ಹೇಳಿದ್ದಾರೆ. ಆದರೆ, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ 15, ಅಕ್ಟೋಬರ್ ಹೊರಡಿಸಿದ ಸುತ್ತೋಲೆಯಲ್ಲಿ ಏಕಖ ಒಚಿರಟಿಜಣ ಶಾಲೆಗಳೊಂದಿಗೆ ಸುತ್ತಲಿನ ಕಡಿಮೆ ದಾಖಲಾತಿಯ ಶಾಲೆಗಳನ್ನು ವೀಲೀನಗೊಳಿಸಬೇಕು ಎಂದು ಆದೇಶಿಸಿದೆ.
ಅಂತೆಯೇ, ಏಕಖ ಶಾಲೆಯನ್ನಾಗಿ ಉನ್ನತೀಕರಿಸುತ್ತಿರುವ ಹಲವು ಶಾಲೆಗಳಿಗೆ ಸುತ್ತಲಿನ ಶಾಲೆಗಳನ್ನು ವೀಲೀನಗೊಳಿಸಿಸಬೇಕು ಎಂಬ ಆದೇಶವನ್ನು ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದ ಹಲವು ಶಾಲೆಗಳಿಗೆ ನೀಡಲಾಗಿದೆ. ಅಧಿವೇಶನದಲ್ಲಿ ಸಚಿವರೇ ಹೇಳಿದಂತೆ, ಗ್ರಾಮ ಪಂಚಾಯಿತಿಗೊಂದರಂತೆ ಏಕಖ ಒಚಿರಟಿಜಣ ಶಾಲೆಗಳನ್ನು ತೆರೆಯಲಾಗುತ್ತದೆ, ಅಂದರೆ ತಮ್ಮದೇ ಇಲಾಖೆಯ ಆದೇಶದಂತೆ ಸರ್ಕಾರ ಮುಂದುವರೆಯುತ್ತಿದೆ. ಈಗ ಮೂಡುವ ಪ್ರಶ್ನೆಯೆಂದರೆ, ಸರ್ಕಾರದ ಆದೇಶಗಳು ಹೇಳುವುದೇ ಒಂದು, ಮಂತ್ರಿಗಳ ಹೇಳಿಕೆ ಮತ್ತೊಂದು. ಜನ ಯಾವುದನ್ನು ನಂಬಬೇಕು? ಆದ್ದರಿಂದ, ಕನ್ನಡ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂಬ ಸಚಿವರ ಒಳ್ಳೆಯ ಆಶಯ ನಿಜವಾದಲ್ಲಿ, ಈ ಕೂಡಲೇ ರಾಜ್ಯ ಸರ್ಕಾರ ತನ್ನ ಅಕ್ಟೋಬರ್ 15ರ ಆದೇಶದಲ್ಲಿ ನಮೂದಿಸಿರುವ ವೀಲೀನದ ಅಂಶವನ್ನು ಹಿಂಪಡೆಯಲಿ ಜೊತೆಗೆ ವೀಲೀನದ ಹೆಸರಿನಲ್ಲಿ ಕಡಿಮೆ ದಾಖಲಾತಿಯ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಲಿಖಿತ ಆದೇಶ ಹೊರಡಿಸಲಿ ಎಂದು ಂಋಖಓ ಆಗ್ರಹಿಸುತ್ತದೆ. ಹೇಳಿಕೆ ಇವರಿಂದ, ಗಂಗರಾಜ ಅಳ್ಳಳ್ಳಿಜಿಲ್ಲಾ ಸಂಚಾಲಕರು ಂಋಖಓ ಕೊಪ್ಪಳ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 