ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಲು ಎಐಡಿಎಸ್‌ಓ ಪ್ರತಿಭಟನೆ
AIDSSO protests to resolve students' academic confusion
ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಲು ಎಐಡಿಎಸ್‌ಓ ಪ್ರತಿಭಟನೆ
ಹಾವೇರಿ 13: ಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯನ್ನಾಗಿರುವ ಗೊಂದಲವನ್ನು ಹಾಗೂ ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಲು ಆಗ್ರಹಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.
ಜಿಲ್ಲಾ ಸಂಚಾಲಕಿ ಪೂಜಾ ನಂದಿಹಳ್ಳಿ ಮಾತನಾಡಿ ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ಒಂದು ವರೆ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ.ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ.ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ.ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ.ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಪ್ರಕರಣದಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ.ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು.ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಎಐಡಿಎಸ್‌ಓ ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರಜ್ವಲ್,ಹೇಮತ್ ದೇವಗೇರಿ,ಆಕಾಂಕ್ಷ ನಾಯಕ,ವಿಕಾಸ ಬಿ ಬರದೂರ,ಭರತ್ ಉಪ್ಪಿನಾಳ,ಜಗದೀಶ ಎಮ್,ಡಿ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 