ಖಾಲಿ ಹುದ್ದೆಗಳ ಭರ್ತಿಗಾಗಿ ಎಐಡಿವೈಓದಿಂದ ಸಹಿ ಸಂಗ್ರಹ ಅಭಿಯಾನ
AIDYO launches signature collection campaign to fill vacant posts
ಬಳ್ಳಾರಿ 08: ಖಾಲಿ ಹುದ್ದೆಗಳ ಭರ್ತಿಗಾಗಿ ಎಐಡಿವೈಓದಿಂದ ಸಹಿ ಸಂಗ್ರಹ ಅಭಿಯಾನ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್(ಎಐಡಿವೈಓ) ಅಖಿಲ ಭಾರತ ಸಮಿತಿಯ ಕರೆಯ ಮೇರೆಗೆ ಇಂದು ಸರ್ಕಾರಿ ಗ್ರಂಥಾಲಯದ ಮತ್ತು ವಿವಿಧ ಕಡೆಗಳಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಕೇಂದ್ರ ಸರ್ಕಾರದ 78 ಇಲಾಖೆಗಳಲ್ಲಿ ಖಾಲಿ ಇರುವ 9.79 ಲಕ್ಷ ಹುದ್ದೆಗಳನ್ನು ಹಾಗೂ ಲಕ್ಷರಾಜ್ಯದ 43 ಇಲಾಖೆಗಳಲ್ಲಿನ 2.85 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು. ಎಲ್ಲಾ ನೇಮಕಾತಿಗಳ ವಯೋಮಿತಿಯನ್ನು ಕನಿಷ್ಠ ಐದು ವರ್ಷ ಹೆಚ್ಚಿಸಬೇಕು. ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಬೇಕು. ಎಲ್ಲಾ ರೀತಿಯ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು.
ನೇಮಕಾತಿಯ ಅರ್ಜಿ ಶುಲ್ಕವನ್ನು ಸಂಪೂರ್ಣವಾಗಿ ಕೈಬಿಡಬೇಕು ಹಾಗೂ ನೇಮಕಾತಿ ಪರೀಕ್ಷೆಗಳಿಗೆ ಪರೀಕ್ಷಾರ್ಥಿಗಳು ಹಾಜರಾಗಲು ಉಚಿತ ಸಾರಿಗೆ ವ್ಯವಸ್ಥೆ ಮಾಡಬೇಕು. ಖಾಲಿ ಇರುವ ಚಿತ್ರಕಲಾ, ಸಂಗೀತ, ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಇನ್ನು ಮುಂತಾದ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಈ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷರಾದ ಚನ್ನಬಸವ ಜಾನೇಕಲ್, ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸಿದ ವಿವಿಧ ಪಕ್ಷಗಳ ಸರ್ಕಾರಗಳು ಯುವಜನರನ್ನು ವೋಟ್ ಬ್ಯಾಂಕ್ ಆಗಿ ಮಾಡಿಕೊಂಡಿವೆ. ದೇಶದ ಪ್ರಗತಿಗೆ ಒಂದು ಶಕ್ತಿಯಾಗಿರುವ ಯುವಜನರನ್ನು ಸರಿಯಾಗಿ ಬೆಳಸಿಕೊಳ್ಳುತ್ತಿಲ್ಲ ಅವರ ಮಾನಸಿಕ, ದೈಹಿಕ ಬೆಳವಣಿಗೆ ಬಗ್ಗೆ ಕಾಳಜಿ ಇಲ್ಲ. ವಯೋಮಿತಿ ಮೀರುತ್ತಿರುವಎಷ್ಟೋ ಜನ ಯುವಜನರು ಮಾನಸಿಕ ಅಸ್ವಸ್ಥತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.
ಉದ್ಯೋಗಗಳನ್ನು ಕೊಡದೆ, ಇನ್ನೊಂದೆಡೆ ಕುಡಿತ, ಜೂಜು, ಮಾದಕ ವ್ಯಸನಗಳನ್ನು ಹರಡಲಾಗುತ್ತಿದೆ ಎಂದರು.ಯೋಗ್ಯವಾದ ಜೀವನ ನಡೆಸಲು ಘನತೆಯ ಬದುಕು ನಡೆಸಲು ಸಾಧ್ಯವಾಗದ ವೇತನದಲ್ಲಿ ಗುತ್ತಿಗೆ, ಹೊರಗುತ್ತಿಗೆ, ಅತಿಥಿ ಶಿಕ್ಷಕರ ಹೆಸರಿನಲ್ಲಿ ದುಡಿಸಿಕೊಳ್ಳಲಾಗುತ್ತಿದೆ ಎಂದರು. ಇತ್ತೀಚಿಗೆ ಧಾರವಾಡದಲ್ಲಿ ಉದ್ಯೋಗ ಕೊಡಿ ಎಂದು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಉದ್ಯೋಗ ಆಕಾಂಕ್ಷಿಗಳ ಮೇಲೆ ಲಾಠಿ ಪ್ರಹಾರ ನಡೆಸಲಾಗಿದೆ. ಇದು ಅತ್ಯಂತ ಖಂಡನೀಯ ಕ್ರಮವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಸಂಘಟನೆಯ ಸದಸ್ಯರಾದ ಬಸವರಾಜ, ಆನಂದ, ಮಂಜುನಾಥ, ಹನುಮಂತ, ಮಮತಾ, ಈಶಮ್ಮ, ಈಶಪ್ಪ, ಮೌನೇಶ, ನಾಗರಾಜ್, ವೆಂಕಟೇಶ್ ಇನ್ನು ನೂರಾರು ಯುವಜನರು ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ ಬೆಂಬಲಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 