ಆಶಾ ಕಾರ್ಯಕರ್ತೆಯರ : ಆ.12 ರಿಂದ ಆಹೋರಾತ್ರಿ ಧರಣಿ ಸತ್ಯಾಗ್ರಹ
ASHA workers: Round-the-clock sit-in from August 12
ಆಶಾ ಕಾರ್ಯಕರ್ತೆಯರ : ಆ.12 ರಿಂದ ಆಹೋರಾತ್ರಿ ಧರಣಿ ಸತ್ಯಾಗ್ರಹ
ಬಳ್ಳಾರಿ 05: ರಂದು ನಗರದಲ್ಲಿ ಮುಖ್ಯಮಂತ್ರಿಯವರು ಕಳೆದ 7 ತಿಂಗಳ ಹಿಂದೆ ನೀಡಿದ ಆದೇಶಗಳನ್ನು ಕೂಡಲೇ ಜಾರಿ ಮಾಡಬೇಕೆಂದು ಆ.12 ರಿಂದ ಮೂರು ದಿನಗಳ ಕಾಲರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಿ ಸರ್ಕಾರ "ಮಾತುಕೊಟ್ಟಂತೆ ನಡೆದುಕೊಳ್ಳಬೇಕೆಂದು" ಆಗ್ರಹಿಸಲಿದ್ದಾರೆಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹೇಳಿದೆ.ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಈ ವಿಷಯ ತಿಳಿಸಿದರು.ಆಶಾಗಳಲ್ಲಿಯೇ ಒಬ್ಬರನ್ನು ಕಳೆದ 10 ವರ್ಷಗಳಿಂದ 20 ಆಶಾಗಳಿಗೆ ಒಬ್ಬರಂತೆ ಸುಮರು 2000 ಸುಗಮಕಾರರಾಗಿ ಕೆಲಸಕ್ಕೆ ಪಡೆದುಕೊಂಡು ಧಿಡೀರನೆ ತೆಗೆದು ಹಾಕಿರುವುದು ಸರಿಯಲ್ಲ. 60 ವರ್ಷ ವಯಸ್ಸಿನ ಆಶಾ ಕಾರ್ಯಕರ್ತೆಯರಿಗೆ ಧಿಡೀರನೆ ತೆಗೆದು ನಿವೃತ್ತಿ ಮಾಡಿರುತ್ತಾರೆ. 17 ವರ್ಷದಿಂದ ಸೇವೆ ಮಾಡಿದ ಈ ಆಶಾಗೆ ಯಾವುದೇ ಪರಿಹಾರ ನೀಡದೆ ಬೀದಿಗೆ ತಳ್ಳಿರುವುದು ಸಹ ಸೂಕ್ತವಾದುದಲ್ಲ.ಈಗ ಕಾರ್ಯ ನಿರ್ವಹಿಸುವ ಸುಮಾರು 41000 ಆಶಾಗಳಿಗೆ ಅವರ ಕೆಲಸದ ಮೌಲ್ಯಮಾಪನ ಮಾಡುವ ಆದೇಶ ಹೊರಡಿಸಿ ವಿವಿಧ ರೀತಿಯಲ್ಲಿ ಮೌಲ್ಯಮಾಪನ ಮಾಡಿಸುತ್ತಿದ್ದಾರೆ.
ಮೌಲ್ಯಮಾಪನದ ಮಾದರಿಯನ್ನು ಸಂಘದಿಂದ ಸಂಪೂರ್ಣವಾಗಿ ವಿರೋಧಿಸುತ್ತೇವೆ. ಏಕೆಂದರೆ ಆನ್ ಲೈನ್ದಾಖಲಾತಿಯು ಸರಿಯಾಗಿ ದಾಖಲಾಗದಿರುವ ಬಗ್ಗೆ, ವೆರಿಫೈ ಮಾಡದಿರುವ ಬಗ್ಗೆ, ಹಲವಾರು ತಾಂತ್ರಿಕ ಸಮಸ್ಯೆಗಳ ಬಗ್ಗೆ ಕಳೆದ ಹಲವಾರು ವರ್ಷಗಳಿಂದ ಸಂಘದಿಂದ ಹೋರಾಡುತ್ತಲೇ ಇದ್ದೇವೆ. ಈಗ ಇದನ್ನು ಮಾದರಿಯಾಗಿ ಇಟ್ಟುಕೊಂಡಲ್ಲಿ ತಪ್ಪು ಮಾಹಿತಿಯಿಂದ ಆಶಾಗಳನ್ನು ಕೈಬಿಡುವಂತಾಗುತ್ತದೆ.ಕಳೆದ ಜನವರಿ 10 ರಂದು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ, ಮುಖ್ಯಮಂತ್ರಿಗಳು ಸಂಘದ ಪದಾಧಿಕಾರಿಗಳ ಸಭೆಯಲ್ಲಿ. ಏಪ್ರಿಲ್ 2025ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ರೂ.10,000 ಗಳ ಗೌರವಧನವನ್ನು ನೀಡಲಾಗುವುದು. ರೂ.10,000 ಹೊರತುಪಡಿಸಿ, ಕಾಂಪೋನೆಂಟ್ ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು.
ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್ಸ್ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ, ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, ರೂ. 10,000 ಗ್ಯಾರಂಟಿಯಾಗಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು. ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಳ ಮಾಡಲಾಗುವುದು. ಎಂದು ಭರವಸೆ ನೀಡಲಾಗಿತ್ತು.ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ರೂ.1000 ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ರೂ.1000 ಹೆಚ್ಚಳ ಮಾಡಬೇಕು ಎಂದು ಈ ಹೋರಾಟ ನಡೆಯಲಿದೆಂದು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 