ಬಜೆಟ್‌ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ
Abolish the contract system for outsourced employees of urban local bodies in the budget
ಬಜೆಟ್‌ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ
ಹಾವೇರಿ 07: ರಾಜ್ಯ ಸರಕಾರ ಮಂಡಿಸಿದ ಬಜೆಟ್‌ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ ಪೌರಕಾರ್ಮಿಕರ ಮಾದರಿಯಲ್ಲಿ ಹೊರಗುತ್ತಿಗೆ ನೌಕರರಿಗೆ ನೇರಪಾವತಿ ಜಾರಿಗೊಳಿಸದೆ ಅನ್ಯಾಯ ಎಸಗಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಮಾಳಗಿ,ಉಪಾಧ್ಯಕ್ಷರು ನಾಗೇಶ್ ಮಲ್ಲೋಲ,ಹಾವೇರಿ ನಗರಸಭೆಯ ಹೊರಗುತ್ತಿಗೆ ಕಾರ್ಮಿಕರು ಆರೋಪಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರ ಕಳೆದ ಚುನಾವಣಾ ಕಾಲಕ್ಕೆ ಎಲ್ಲ ಪೌರಕಾರ್ಮಿಕರನ್ನು ಖಾಯಂಗೊಳಿಸುವ ಆರನೇ ಗ್ಯಾರಂಟಿ ನೀಡಿತ್ತು. ಆದರೆ ಪೌರಕಾರ್ಮಿಕರಲ್ಲಿ ತಾರತಮ್ಯ ಎಸಗಿರುವ ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಕಸದ ಕಾಲಕರು, ನೀರು ಸರಬರಾಜು ಸಹಾಯಕರು ಸೇರಿದಂತೆ ಸಾವಿರಾರು ನೌಕರರಿಗೆ ಗುತ್ತಿಗೆ ಪದ್ದತಿಯನ್ನು ಹೇರಿದೆ.
ಹೊರಗುತ್ತಿಗೆ ನೌಕರರ ಸಂಘದ ತೀವ್ರ ಹೋರಾಟದ ಪರಿಣಾಮ ಈ ಬಾರಿಯ ಬಜೆಟ್‌ನಲ್ಲಿ ನೇರಪಾವತಿ ಘೋಷಣೆಗೆ ಅಗತ್ಯ ಪ್ರಸ್ತಾವನೆ ಸಲ್ಲಿಸಲು ಹಣಕಾಸು ಇಲಾಖೆ ಸೂಚನೆ ನೀಡಿತ್ತು. ಅದರಂತೆ ನಗರಾಭಿವೃದ್ಧಿ ಇಲಾಖೆ ಅಗತ್ಯ ಪ್ರಸ್ತಾವನೆ ಸಲ್ಲಿಸಿದ್ದರೂ ಗುತ್ತಿಗೆ ಏಜೆನ್ಸಿಗಳ ಲಾಭಿಗೆ ಶರಣಾಗಿರುವ ರಾಜ್ಯ ಸರಕಾರ ಹೊರಗುತ್ತಿಗೆ ನೌಕರರಿಗೆ ವಿಶ್ವಾಸ ದ್ರೋಹ ಎಸಗಿದೆ.
ರಾಜ್ಯ ಸರಕಾರ ಎಚ್ಚೆತ್ತು ಗುತ್ತಿಗೆ ಪದ್ಧತಿ ರದ್ದುಗೊಳಿಸಿ ನೇರಪಾವತಿ ಜಾರಿಗೊಳಿಸಬೇಕು. ತಪ್ಪಿದ್ದಲ್ಲಿ ರಾಜ್ಯಾದ್ಯಂತ ಕುಡಿ0ುುವ ನೀರು,ಸ್ವಚ್ಛತೆ ಬಹಿಷ್ಕರಿಸಿ ಅನಿರ್ದಿಷ್ಟವಧಿ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 