ಸಾರ್ವಜನಿಕರ ಅಹವಾಲು ಸ್ವೀಕಾರ, ಸ್ಪಂದನೆ: ಶಾಸಕ ಮಾನೆ
Acceptance and response to public demands: MLA Mane
ಸಾರ್ವಜನಿಕರ ಅಹವಾಲು ಸ್ವೀಕಾರ, ಸ್ಪಂದನೆ: ಶಾಸಕ ಮಾನೆ
ಹಾನಗಲ್, 26 : ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶಾಸಕ ಶ್ರೀನಿವಾಸ ಮಾನೆ ಜನತಾ ದರ್ಶನ ನಡೆಸಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಪಂದಿಸಿದರು. ತಾಲೂಕಿನ ನಾನಾ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಸಾರ್ವಜನಿಕರು ತಮ್ಮ ಸಮಸ್ಯೆ, ಮೂಲಭೂತ ಸೌಲಭ್ಯಗಳ ಕೊರತೆ, ರಸ್ತೆ, ನೀರು, ವಿದ್ಯುತ್ ಸೇರಿದಂತೆ ಹತ್ತಾರು ಅಹವಾಲುಗಳನ್ನು ಸಲ್ಲಿಸಿದರು. ಪ್ರತಿಯೊಂದು ಅಹವಾಲನ್ನು ಸಮಾಧಾನದಿಂದ ಆಲಿಸಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಸೂಕ್ತ ಸೂಚನೆ ನೀಡಿದರು. ಕೆಲ ತುರ್ತು ವಿಷಯಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸುವ ಮೂಲಕ ಜನಮೆಚ್ಚುಗೆಗೆ ಪಾತ್ರರಾದರು. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವುದು ನನ್ನ ಮೊದಲ ಆದ್ಯತೆ. ಜನರ ಮಧ್ಯೆ ಇರುವುದರಿಂದ ಅವರ ದೂರು, ದುಮ್ಮಾನಗಳನ್ನು ಆಲಿಸಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಸಾರ್ವಜನಿಕರ ಭೇಟಿಗೆ ಲಭ್ಯನಿದ್ದು, ಸಮಸ್ಯೆಗಳನ್ನು ಪರಿಹರಿಸಲು ಕಾಳಜಿ ವಹಿಸಿದ್ದಾಗಿ ಶಾಸಕ ಶ್ರೀನಿವಾಸ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 