ಗಜೇಂದ್ರಗಡದಲ್ಲಿ ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ
ಗದಗ 24: ಗಜೇಂದ್ರಗಡ ತಹಶೀಲ್ದಾರ ಕಚೇರಿಯಲ್ಲಿಂದು (ದಿ.24) ಗದಗ ಜಿಲ್ಲಾಧಿಕಾರಿ ಮನೋಜ್ ಜೈನ್ ಅವರಿಂದ ಸಾರ್ವಜನಿಕ ಕುಂದುಕೊರತೆಗಳ ಸಭೆಯುಜರುಗಿತು. ಕುಂಟೋಜಿ ಗ್ರಾಮದಲ್ಲಿ ರೇಷ್ಮೆ ಇಲಾಖೆಯಿಂದ ನಿಮರ್ಿಸಿದ ಶೆಡ್ ಮಳೆ ಗಾಳಿಯಿಂದ ಹಾನಿಗೊಳಗಾಗಿದ್ದು ಅದರ ದುರಸ್ತಿ ಕುರಿತ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಕೂಡಲೆ ದುರಸ್ತಿ ಮಾಡಲು ಸೂಚಿಸಿದರು. ಜಿಂಕೆಗಳ ಹಾಗೂ ಮಳೆಯಿಂದಾಗಿ ಬೆಳೆ ಹಾನಿಗೆ ಪರಿಹಾರ ಒದಗಿಸುವ ಕುರಿತ ಅಹವಾಲು ಸ್ವೀಕರಿಸಿ ಸಂಬಂಧಿಸಿದ ಅಧಿಕಾರಿಗಳು ಕ್ರಮ ಜರುಗಿಸಲು ಸೂಚಿಸಿದ ಅವರು ಸಿ.ಪಿ.ಐ.ಎ.ಂ. ಶಾಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ, ಬಡವರಿಗಾಗಿ ಗ್ಯಾಸ್ ಸಿಲೆಂಡರ ಪೂರೈಸುವ, ಜೀಗೂರ ಗ್ರಾಮಕ್ಕೆ ಗ್ರಾ. ಪಂ. ಸೌಲಭ್ಯ ಒದಗಿಸಲು ಸೂಚನೆ ನೀಡಿದರು. ಗಜೇಂದ್ರಗಡ ಪುರಸಭೆಯ ವ್ಯಾಪ್ತಿಗೊಳಪಡುವ ಪ್ರದೇಶಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಪುರಸಭೆ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಹೊಸದಾಗಿ ಕಾಯರ್ಾರಂಭಗೊಂಡಂತಹ ಗಜೇಂದ್ರಗಡ ತಾಲೂಕಿನಲ್ಲಿ ಆಧಾರ ಕೇಂದ್ರ ಸ್ಥಾಪಿಸಲು ಹಾಗೂ ಮಳೆಯಿಂದ ಕುಸಿದ ಮನೆಗಳಿಗೆ ಸರಕಾರದಿಂದ ಸೂಕ್ತ ಪರಿಹಾರ ವಿತರಣೆಗೆ ಜಿಲ್ಲಾಧಿಕಾರಿಗಳು ತಹಶೀಲ್ದಾರರಿಗೆ ಸೂಚನೆ ನೀಡಿದರು.
ಜಿ.ಪಂ. ಪ್ರಭಾರಿ ಸಿ.ಇ.ಓ. ಎಸ್.ಸಿ.ಮಹೇಶ, ಗದಗ ಉಪವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ನಗರಾಭಿವೃದ್ದಿ ಕೋಶದ ಯೋಜನಾ ನಿದರ್ೇಶಕ ಎಸ್.ಎನ್. ರುದ್ರೇಶ, ಕೃಷಿ ಇಲಾಖೆ ಜಂಟಿ ನಿದರ್ೇಶಕ. ಕೆ.ಸಿ.ಬಾಲರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕ ಜಿ. ರುದ್ರಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿದರ್ೇಶಕ ಅಶೋಕ ಕಲಘಟಗಿ, ಗಜೇಂದ್ರಗಡ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಹನುಮಂತಮ್ಮ, ತಹಶೀಲ್ದಾರ ಎಸ್.ಎಸ್.ವಾಲಿ ಸೇರಿದಂತೆ ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಜುಲೈ 28ರಂದು ಮುಂಜಾನೆ 11.30 ರಿಂದ ಮಧ್ಯಾಹ್ನ 1.30 ರ ವರೆಗೆ ರೋಣ ತಹಶೀಲ್ದಾರ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 