ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ

ಧಾರವಾಡ 22: ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಹಿರಿಯ ಕೆ.ಎ.ಎಸ್. ಅಧಿಕಾರಿ ಡಾ.ಸುರೇಶ ಇಟ್ನಾಳ ಅವರು ಫೆಬ್ರವರಿ 19,2019 ರಂದು ಅಧಿಕಾರ ಸ್ವೀಕರಿಸಿದ್ದಾರೆ.

2006 ಕೆ.ಎ.ಎಸ್ ಬ್ಯಾಚ್ನ ಡಾ ಸುರೇಶ   ಇಟ್ನಾಳ ಅವರು ಮೂಲತ: ಬೆಳಗಾವಿ ಜಿಲ್ಲೆ ಕಿತ್ತೂರ ತಾಲೂಕಿನವರು.ವೃತ್ತಿ ಜೀವನದ ಆರಂಭದಲ್ಲಿ ಹಾವೇರಿ, ಸವಣೂರ ಮತ್ತು ಧಾರವಾಡದಲ್ಲಿ ಉಪವಿಭಾಗಾಧಿಕಾರಿಯಾಗಿ ಮತ್ತು ಕೊಪ್ಪಳ, ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಪ್ರಸ್ತುತ ಧಾರವಾಡ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.