ಅಂತರ್ ಕಾಲೇಜು ಕ್ರೀಡಾ ಕೂಟಗಳಲ್ಲಿ ಸರಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ
Achievements of Government Women's Degree College students in inter-collegiate sports events
ಕೊಪ್ಪಳ 06 : 2025-26 ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಥ್ರೂಬಾಲ್ ಹಾಗೂ ಗುಡ್ಡಗಾಡು ಓಟದ ಸ್ಪರ್ಧೆಗಳು ಫೆಬ್ರವರಿ 3 ಮತ್ತು 4 ರಂದು ಬಳ್ಳಾರಿಯ ಅಲ್ಲಂ ಸುಮಂಗಳಮ್ಮ ಮೆಮೋರಿಯಲ್ ಮಹಿಳಾ ಕಾಲೇಜಿನಲ್ಲಿ ನಡೆದವು. ಈ ಕ್ರೀಡಾಕೂಟಗಳಲ್ಲಿ ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಥ್ರೂಬಾಲ್ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ. ಅದೇ ರೀತಿ ಗುಡ್ಡಗಾಡು ಓಟದ ತಂಡವು ದ್ವಿತೀಯ ಸ್ಥಾನವನ್ನುಗಳಿಸಿರುತ್ತದೆ.
ಕಾಲೇಜಿನ ವಿದ್ಯಾರ್ಥಿನಿಯರಾದ ಪಾರ್ವತಿ ಹಾಗೂ ಸರಿತಾ ಚೌಹಾಣ ವಿಶ್ವವಿದ್ಯಾಲಯದ ಗುಡ್ಡಗಾಡು ಓಟದ ತಂಡಕ್ಕೆ (ಗಟಿತಜಢಿಣಥಿ ಃಟಣಜ) ಆಯ್ಕೆಯಾಗಿರುತ್ತಾರೆ. ಮುಂದಿನ ದಿನಗಳಲ್ಲಿ ಈ ವಿದ್ಯಾರ್ಥಿನಿಯರು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಪ್ರತಿನಿಧಿಸಲಿದ್ದಾರೆ.
ಈ ಕ್ರೀಡಾಕೂಟಗಳು ಮಂಗಳೂರು ವಿಶ್ವವಿದ್ಯಾಲಯದಲ್ಲಿ 27ನೇ ಫೆಬ್ರವರಿ 2026 ರಂದು ಜರುಗಲಿದೆ. ವಿದ್ಯಾರ್ಥಿನಿಯರ ಈ ಸಾಧನೆಯನ್ನು ಮೆಚ್ಚಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣಪತಿ ಕೆ ಲಮಾಣಿ, ದೈಹಿಕ ಶಿಕ್ಷಣ ಬೋಧಕರಾದ ಡಾ. ಪ್ರದೀಪ್ ಕುಮಾರ್ ಯು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು, ಅತಿಥಿ ಉಪನ್ಯಾಸಕರು ಹಾಗೂ ಕಾಲೇಜಿನ ಎಲ್ಲ ವಿದ್ಯಾರ್ಥಿನಿಯರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 