ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಸಚಿವ ದಿನೇಶ್ ಗುಂಡೂರಾವ್
Action against private hospitals performing unnecessary caesarean deliveries to collect money: Mini
ಬೆಳಗಾವಿ ಸುವರ್ಣಸೌಧ,(ಡಿ.08): ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು.
ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ. ಹಾಗೂ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡಿರುವ ಬಗ್ಗೆ, ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ.
ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ ಪಿ ಎಂ ಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು. ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು,ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ, ಅಧಿನಿಯಮದ ಸೆಕ್ಷನ್15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 