ಬೆಳಗಾವಿ, 04: ಸರಕು ಸಾಗಣೆ ಅಥವಾ ಕನ್ಸ್ಟ್ರಕ್ಷನ್ ವಾಹನಗಳಲ್ಲಿ ಕಾಮರ್ಿಕರನ್ನು ಹಾಗೂ ಸಾರ್ವಜನಿಕರನ್ನು ಅಮಾನವೀಯ ರೀತಿಯಲ್ಲಿ ಸಾಗಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ಅವರು ತಿಳಿಸಿದ್ದಾರೆ.
ಸರಕು ಸಾಗಾಣಿಕೆ, ಕನ್ಸ್ಟ್ರಕ್ಷನ್ ವಾಹನಗಳಲ್ಲಿ ಕಾಮರ್ಿಕರನ್ನು ಹಾಗೂ ಆಟೋಗಳಲ್ಲಿ ಕಾನೂನುಬಾಹಿರವಾಗಿ ಹೆಚ್ಚಿನ ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಕನರ್ಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ(ಮೇ 4) ನಡೆದ ವಿವಿಧ ಇಲಾಖೆಗಳು, ಉದ್ಯೋಗದಾತರು ಹಾಗೂ ಕಾಮರ್ಿಕ ವರ್ಗದ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಕಾರಣಗಳಿಂದಾಗಿ ಕಾಮರ್ಿಕರು ಹಾಗೂ ಜನರನ್ನು ಸರಕು ಸಾಗಾಣಿಕೆ ವಾಹನಗಳಲ್ಲಿ ಸಾಗಾಣಿಕೆ ಮಾಡಲಾಗುತ್ತಿದೆ. ಪ್ರಮುಖವಾಗಿ ಬಸ್ ಸೌಕರ್ಯದ ಕೊರತೆ ಇರುವ ಕಡೆಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತಿವೆ.
ಆದ್ದರಿಂದ ಅಗತ್ಯವಿರುವ ಕಡೆಗಳಲ್ಲಿ ತಕ್ಷಣವೇ ಹೆಚ್ಚುವರಿ ಬಸ್ ಸೌಲಭ್ಯವನ್ನು ಒದಗಿಸಬೇಕು ಎಂದು ಸಾರಿಗೆ ಇಲಾಖೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಅದೇ ರೀತಿ ಸರಕು ಸಾಗಾಣಿಕೆ ವಾಹನಗಳಲ್ಲಿ ಜನರನ್ನು ಸಾಗಾಣಿಕೆ ಮಾಡುತ್ತಿರುವ ವಾಹನಗಳ ಮೇಲೆ ಕ್ರಮ ಕೈಗೊಳ್ಳಲು ಕಾರ್ಯಾ ಚರಣೆಯನ್ನು ಆರಂಭಿಸುವಂತೆ ಪ್ರಾದೇಶಿಕ ಸಾರಿಗೆ ಹಾಗೂ ಸಂಚಾರಿ ಪೊಲೀಸ್ ಅಧಿಕಾರಿಗಳಿಗೆ ನಿದರ್ೇಶನವನ್ನು ನೀಡಿದರು.
ವೈಜ್ಞಾನಿಕ ರೀತಿಯಲ್ಲಿ ರಸ್ತೆ ನಿರ್ಮಾ ಣ:
ಯಾವುದೇ ರೀತಿಯ ವಾಹನಗಳು ಅಪಘಾತವಾಗದಂತೆ ಎಚ್ಚರಿಕೆ ವಹಿಸಬೇಕಾದರೆ ವೈಜ್ಞಾನಿಕ ರೀತಿಯಲ್ಲಿ ರಸ್ತೆಗಳ ನಿರ್ಮಾ ಣ, ರಿಫ್ಲೆಕ್ಟರ್ ಅಳವಡಿಕೆ, ಸಂಚಾರಿ ನಿಯಮಗಳಿಗೆ ಸಂಬಂಧಿಸಿದಂತೆ ಚಿಹ್ನೆಗಳ ಅಳವಡಿಕೆಗೆ ಜಿಲ್ಲಾಡಳಿತದ ವತಿಯಿಂದ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ಅವರು ಭರವಸೆ ನೀಡಿದರು.
ಕಾಮರ್ಿಕರನ್ನು ಅಮಾನವೀಯವಾಗಿ ಸರಕು ವಾಹನಗಳಲ್ಲಿ ಸಾಗಾಣಿಕೆ ಮಾಡುವುದು ಕಾನೂನುಬಾಹಿರವಾಗಿದೆ. ಇದರಿಂದಾಗುವ ತೊಂದರೆಗಳ ಬಗ್ಗೆ ಕಾಖರ್ಾನೆಗಳ ಮಾಲೀಕರಿಗೆ ಮತ್ತಿತರರಿಗೆ ವಿವಿಧ ಹಂತಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಕಾಮರ್ಿಕ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಉಚ್ಛ ನ್ಯಾಯಾಲಯಕ್ಕೆ ಮಾಹಿತಿ- ಎಸ್.ಪಾಲಯ್ಯ:
ಸರಕು ಸಾಗಾಣಿಕೆ ವಾಹನದಲ್ಲಿ ಕಾರ್ಮಿ ಕರನ್ನು ಅಮಾನವೀಯವಾಗಿ ಸಾಗಾಣಿಕೆ ಮಾಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಬಹುದು ಎಂಬುದನ್ನು ಮೇ 25 ರೊಳಗೆ ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿರುತ್ತದೆ ಎಂದು ಕಾಮರ್ಿಕ ಇಲಾಖೆಯ ಆಯುಕ್ತರಾದ ಪಾಲಯ್ಯ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳಲ್ಲೂ ಇದಕ್ಕೆ ಸಂಬಂಧಿಸಿದಂತೆ ಸಭೆ ನಡೆಸುವ ಮೂಲಕ ಉದ್ಯೋಗದಾತರು, ಭಾಗೀದಾರ ಇಲಾಖೆಗಳು, ಕಾರ್ಮಿ ಕ ವರ್ಗದ ಪ್ರತಿನಿಧಿಗಳು ಮತ್ತು ವಾಹನ ಚಾಲಕರ ಸಂಘದ ಪದಾಧಿಕಾರಿಗಳ ಅಭಿಪ್ರಾಯವನ್ನು ಸಂಗ್ರಹಿಸಿ, ಕ್ರೋಢೀಕೃತ ವರದಿಯನ್ನು ಉಚ್ಛ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ವಿವರಿಸಿದರು.
ಯಾವ ಯಾವ ಪ್ರದೇಶಗಳಲ್ಲಿ ಕಾಮರ್ಿಕರು ಅಥವಾ ಇತರೆ ಜನರನ್ನು ಅಮಾನವೀಯವಾಗಿ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಬಗ್ಗೆ ಈಗಾಗಲೇ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ಸದರಿ ಮಾಹಿತಿಯನ್ನು ಆಧರಿಸಿ ಈ ಸಮಸ್ಯೆಯ ಪರಿಹಾರಕ್ಕೆ ಸೂಕ್ತ ಕ್ರಿಯಾಯೋಜನೆಯನ್ನು ರೂಪಿಸಲಾಗುವುದು ಎಂದು ಪಾಲಯ್ಯ ಹೇಳಿದರು.
ಜಂಟಿ ಕಾರ್ಯಾ ಚರಣೆ:
ಪೊಲೀಸ್ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ತಂಡ ಜಂಟಿ ಕಾಯರ್ಾಚರಣೆ ಆರಂಭಿಸಿದ್ದು, ಪ್ರಯಾಣಿಕರ ವಾಹನಗಳಲ್ಲಿ ಮಿತಿಮೀರಿ ಸಾಗಾಣಿಕೆ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಈಗಾಗಲೇ ಅಂತಹ 200 ಕ್ಕೂ ಅಧಿಕ ಆಟೋ ಚಾಲಕರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ಕುಮಾರ್ ತಿಳಿಸಿದರು.
ಬರೀ ದಂಡ ವಿಧಿಸುವುದು ನಮ್ಮ ಉದ್ದೇಶವಲ್ಲ; ಕಾನೂನು ಪಾಲನೆ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿಯ ಕಾರ್ಯಾ ಚರಣೆ ನಡೆಸಲಾಗುತ್ತಿದೆ ಎಂದರು.
ಇದಕ್ಕೂ ಮುಂಚೆ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ್ ದೇವರಾಜ್ ಅರಸ್ ಅವರು, "ಸರಕು ಸಾಗಾಣಿಕೆ ವಾಹನಗಳಲ್ಲಿ ಜನರನ್ನು ಕೊಂಡೊಯ್ಯುವುದು ಕಾನೂನುಬಾಹಿರವಾಗಿದೆ. ಇಂತಹ ಸಂದರ್ಭಗಳಲ್ಲಿ ಅನಾಹುತ ಸಂಭವಿಸಿದರೆ ಪರಿಹಾರ ಕೂಡ ಸಿಗುವುದಿಲ್ಲ. ಆದ್ದರಿಂದ ಸುರಕ್ಷಿತ ಪ್ರಯಾಣದ ದೃಷ್ಟಿಯಿಂದ ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ" ಎಂದು ತಿಳಿಸಿದರು.
ಮದುವೆ, ಜಾತ್ರೆ, ಸಂತೆ, ಕೆಲಸಕ್ಕಾಗಿ ಗುಳೆ ಹೋಗುವಂತಹ ಸಂದರ್ಭಗಳಲ್ಲಿ ಜನರನ್ನು ಸರಕು ವಾಹನಗಳಲ್ಲಿ ಸಾಗಾಣಿಕೆ ಮಾಡುವುದು ಸಾಮಾನ್ಯವಾಗಿರುತ್ತದೆ. ಆದ್ದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ರೈತ ಸಮುದಾಯಗಳಲ್ಲಿ ಈ ಬಗ್ಗೆ ತಿಳಿವಳಿಕೆ ಮೂಡಿಸುವ ಕೆಲಸ ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಆರಂಭಿಸಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ನ್ಯಾಯವಾದಿಯೊಬ್ಬರು ಅಭಿಪ್ರಾಯಪಟ್ಟರು.
ಆಟೋಗಳಲ್ಲಿ ಮಿತಿಮೀರಿ ಶಾಲಾ ಮಕ್ಕಳನ್ನು ಸಾಗಿಸುವ ಪ್ರಕರಣಗಳನ್ನು ತಡೆಗಟ್ಟಲು ನಗರ ಪ್ರದೇಶಗಳಲ್ಲಿ ನಿರಂತರ ತಪಾಸಣೆ ನಡೆಸುವ ಅಗತ್ಯವಿದೆ ಎಂದು ಆಟೋ ಚಾಲಕರ ಸಂಘದ ಪ್ರತಿನಿಧಿಗಳು ಸಲಹೆ ನೀಡಿದರು.
ಕಾರ್ಮಿ ಕ ಇಲಾಖೆಯ ಉಪ ಆಯುಕ್ತರಾದ ನಾಗೇಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗ್ದುಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಉದ್ದಿಮೆಗಳ ಮಾಲೀಕರು, ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು, ಕಾಮರ್ಿಕ ಸಂಘದ ಪ್ರತಿನಿಧಿಗಳು, ಆಟೋ ಚಾಲಕರ ಸಂಘದ ಸದಸ್ಯರು ಮತ್ತು ಸಂಘ-ಸಂಸ್ಥೆಯ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.