ಕ್ರೀಡೆಯಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಆರೋಗ್ಯ ಸದೃಢ
Active participation in sports leads to robust health
ಬಾಗಲಕೋಟೆ 21: ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸದೃಢವಾಗಿರುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು. ನವನಗರದ ಅಗ್ನಿಶಾಮಕ ದಳದ ಆವರಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
60 ವರ್ಷ ದಾಟಿದ ಬಳಿಕವೂ ವಯಸ್ಸಿಗೆ ಅನುಗುಣವಾಗಿ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ. ನಿಯಮಿತ ಕ್ರೀಡಾಭ್ಯಾಸದಿಂದ ದೇಹದ ಅಂಗಾಂಗಗಳು ಸಕ್ರಿಯವಾಗುವುದರ ಜತೆಗೆ ಮನಸ್ಸಿಗೂ ಚೈತನ್ಯ ದೊರೆಯುತ್ತದೆ. ನೈಸರ್ಗಿಕ ವಾತಾವರಣದಲ್ಲಿ ಸಮಯ ಕಳೆಯುವುದರಿಂದ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು. ಹಿರಿಯ ನಾಗರಿಕ ಸಿದ್ದಲಿಂಗಪ್ಪ ಗೂಳೇದ ಮಾತನಾಡಿ, ಕುಟುಂಬ ಹಾಗೂ ಸಾಮಾಜಿಕ ಜವಾಬ್ದಾರಿಗಳ ನಡುವೆ ಜೀವನ ಕಳೆದಿರುವ ಹಿರಿಯರಿಗೆ ಇಂತಹ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮನೋಲ್ಲಾಸ ನೀಡುವುದರ ಜತೆಗೆ ಹೊಸ ಚೈತನ್ಯ ಮೂಡಿಸುತ್ತವೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಕೆ. ಮಾತನಾಡಿ, ಹಿರಿಯ ನಾಗರಿಕರಲ್ಲಿ ಸಂತಸ, ಚೈತನ್ಯ ಹಾಗೂ ಉತ್ಸಾಹ ಮೂಡಿಸುವ ಉದ್ದೇಶದಿಂದ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಮಹಾಂತೇಶ ಕುರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಪ್ರಕಾಶ ಪವಾರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಎಂ.ಆರ್.ಡಬ್ಲ್ಯು ಎಂ.ಬಿ. ಪಾಟೀಲ ಸ್ವಾಗತಿಸಿದರು. ಎಸ್.ಟಿ. ಬೀರಗೊಂಡ ವಂದಿಸಿದರು. ಎಂ.ಬಿ. ಮುದ್ನೂರ ನಿರೂಪಿಸಿದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 