ಗದಗ 27: ಗದಗ ಜಿಲ್ಲೆಯು ಕಬಡ್ಡಿ, ಸೈಕ್ಲಿಂಗ, ಹಾಕಿ, ಪುಟ್ ಬಾಲ್, ಕುಸ್ತಿ ಮುಂತಾದ ಕ್ರೀಡೆಗಳಲ್ಲಿ ರಾಷ್ಟ್ರ ಮಟ್ಟದ ಕೊಡುಗೆಯನ್ನು ನೀಡಿದೆ. ಜಿಲ್ಲೆಯ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಒದಗಿಸಲು ಸರ್ವ ಪ್ರಯತ್ನ ಮಾಡಲಾಗುತ್ತಿದೆ. ಈ ಕ್ರೀಡಾ ಸೌಲಭ್ಯ ಗಳನ್ನು ಸದುಪಯೋಗಪಡಿಸಕೊಳ್ಳಬೇಕು ಎಂದು ಶಾಸಕ ಎಚ್.ಕೆ.ಪಾಟೀಲ ನುಡಿದರು.
ಗದುಗಿನ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನರ್ಾಟಕ ರಾಜ್ಯ ಸಕರ್ಾರಿ ನೌಕರರ ಸಂಘ, ಜಿಲ್ಲಾ ಘಟಕ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸಕರ್ಾರಿ ನೌಕರರ ಎರಡು ದಿನಗಳ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪಧರ್ೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗದಗ ಜಿಲ್ಲೆ ಕ್ರೀಡೆ ಸೌಲಭ್ಯ ಒದಗಿಸುವಲ್ಲಿ ಸಾಕಷ್ಟು ಹೊಸ ಹೆಜ್ಜೆಗಳನ್ನಿಟ್ಟಿದೆ. ಸಕರ್ಾರಿ ನೌಕರರು ಕೂಡ ಕ್ರೀಡೆಯನ್ನು ಲಘುವಾಗಿ ಪರಿಗಣಿಸದೇ ಪ್ರತಿಭೆ ಅಭಿವ್ಯಕ್ತಗೊಳಿಸಲು ಒಂದು ಅವಕಾಶವೆಂದು ತಿಳಿಯಬೇಕು. ಕ್ರೀಡೆಗಳು ಶರೀರಕ್ಕೆ ವ್ಯಾಯಾಮದ ಜೊತೆ ಕೆಲಸ ಮಾಡಲು ಸಂತೋಷ ಹಾಗೂ ಉತ್ತೇಜನ ನೀಡುತ್ತವೆ ಎಂದು ಪಾಟೀಲ್ ನುಡಿದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರು ಮಾತನಾಡಿ ಕ್ರೀಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಪಾಲ್ಗೊಳ್ಳಬೇಕು ಎಂದರು. ವ್ಯಕ್ತಿಯ ಸರ್ವತೋಮುಖ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆಗಳು ಬಹುಮುಖ್ಯ. ಆರೋಗ್ಯ ವಂತ ಪ್ರಜೆಗಳಿಂದಲೇ ದೇಶವು ಬಲಿಷ್ಟ ದೇಶವೆಂದು ಪರಿಗಣಿಸಲ್ಪಡುತ್ತದೆ. ರಾಜ್ಯದ ಆಡಳಿತ ಸರಿಯಾಗಿರಲು ನೌಕರ ವರ್ಗದವರು ಆರೋಗ್ಯವಂತರಾಗಿರಬೇಕು. ಪ್ರಾಮಾಣಿಕವಾಗಿ ನಿಷ್ಟೆಯಿಂದ ಕೆಲಸ ಮಾಡಲು ಆರೋಗ್ಯ ಹಾಗೂ ಕ್ರೀಡೆ ಮುಖ್ಯವಾಗಿವೆ. ಅದಕ್ಕಾಗಿ ನಮ್ಮ ದೈನಂದಿನ ಚಟುವಟಿಕೆಯಲ್ಲಿ ಮುಂಜಾನೆ ನಡೆ , ಯೋಗ ಹಾಗೂ ಧ್ಯಾನ ರೂಡಿಸಿಕೊಳ್ಳಬೇಕೆಂದು ಎಸ್.ವಿ. ಸಂಕನೂರ ತಿಳಿಸಿದರು.
ರಾಜ್ಯ ಸಕರ್ಾರಿ ನೌಕರರ ಸಂಘದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರವಿ ಎಲ್ ಗುಂಜೀಕರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಕರ್ಾರಿ ನೌಕರರು ಆಡಳಿತದಲ್ಲಿ ದಕ್ಷತೆ ಹಾಗೂ ನೈಪುಣ್ಯತೆ ತರಲು ಹಾಗೂ ಉತ್ತಮ ಜೀವನ ಹೊಂದಲು ಕ್ರೀಡೆ ಸಹಾಯಕಾರಿ ಎಂದರು.
ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಪಿ. ಬಳಿಗಾರ, ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ತಾ.ಪಂ. ಅಧ್ಯಕ್ಷ ಮೋಹನ ದುರಗಣ್ಣವರ, ಉಪಾಧ್ಯಕ್ಷೆ ಸುಜಾತಾ ಖಂಡು, ನಗರಸಭೆ ಅಧ್ಯಕ್ಷ ಸುರೇಶ ಕಟ್ಟಿಮನಿ, ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿ.ಪಂ. ಸದಸ್ಯ ಸಿದ್ದು ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕ ಬಿ.ಬಿ. ವಿಶ್ವನಾಥ, ರಾಜ್ಯ ಸಕರ್ಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಅಧಿಕಾರಿ ಸಿಬ್ಬಂದಿಗಳು, ಉಪಸ್ಥಿತರಿದ್ದರು. ಎಸ್.ಆರ್. ಬಂಡಿ ಸ್ವಾಗತಿಸಿದರು. ಗದಗ ಜಿಲ್ಲಾ ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದಶರ್ಿ ಕೆ.ಎಫ್. ಹಳ್ಯಾಳ ವಂದಿಸಿದರು. ವೈ.ಕೆ. ಚೌಡಾಪುರ ಕಾರ್ಯಕ್ರಮ ನಿರೂಪಿಸಿದರು.