ವಿಜೃಂಭಣೆಯಿಂದ ಜರುಗಿದ ಅದ್ದಪ್ಪ ಬೀರಲಿಂಗೇಶ್ವರ ಗಂಗೆಸ್ಥಳ ಮೆರವಣಿಗೆ
Addappa Beeralingeshwara Gangesthala procession held with great pomp
ವಿಜೃಂಭಣೆಯಿಂದ ಜರುಗಿದ ಅದ್ದಪ್ಪ ಬೀರಲಿಂಗೇಶ್ವರ ಗಂಗೆಸ್ಥಳ ಮೆರವಣಿಗೆ
ಕಂಪ್ಲಿ 10: ಹಾಲಿನಂತೆ ಮನಸ್ಸಿರುವ ಹಾಲುಮತ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಸಹಕರಿಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ಪಟ್ಟಣದಲ್ಲಿ ಹಾಲುಮತ ಸಮಾಜದಿಂದ ಶ್ರಾವಣಮಾಸದ ಪ್ರಯುಕ್ತ ಆಯೋಜಿಸಿದ್ದ ಅದ್ದಪ್ಪ ಬೀರಲಿಂಗೇಶ್ವರ ದೇವರ ಗಂಗೆಸ್ಥಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಸಮಾಜವು ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕಾಗಿದೆ. ನಾಡಿನ ಸಂಸ್ಕೃತಿ, ಸಂಪ್ರದಾಯಗಳು ಉಳಿಸಿಕೊಂಡು ಬರಲಾಗುತ್ತಿದೆ. ಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ಕೊಡಿಸಿ, ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದರು.
ಇಲ್ಲಿನ ಕಂಪ್ಲಿ-ಕೋಟೆಯ ತುಂಗಭದ್ರ ನದಿ ತಟದಲ್ಲಿ ಗಂಗೆಪೂಜೆ ಸಲ್ಲಿಸಿ ನಂತರ ಆರಂಭಗೊಂಡ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿ, ಇಲ್ಲಿನ ನಡುವಲ ಮಸೀದಿ, ಡಾ.ರಾಜಕುಮಾರ ರಸ್ತೆ, ಅಂಬೇಡ್ಕರ್ ವೃತ್ತ, ಮಹಾತ್ಮಗಾಂಧಿ ವೃತ್ತದ ಮೂಲಕ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಸಮಾವೇಶಗೊಂಡಿತು. ಈ ಮೆರವಣಿಯಲ್ಲಿ ಸುಮಂಗಲಿಯರ ಕುಂಭ, ಕಳಸ, ಡೊಳ್ಳು ಕುಣಿತ, ಮಂಗಳವಾದ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಮೆರಗು ನೀಡಿದರು. ಇಲ್ಲಿನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕೈಂಕಾರ್ಯಗಳು ಶ್ರದ್ಧೆಯಿಂದ ಜರುಗಿದವು.
ಈ ಸಂದರ್ಭದಲ್ಲಿ ಹಾಲುಮತ ಸಮಾಜದ ಅಧ್ಯಕ್ಷ ಕೆ.ವಸಂತಕುಮಾರ, ಉಪಾಧ್ಯಕ್ಷ ಕುರಿ ಸಿದ್ದಪ್ಪ, ಖಜಾಂಚಿ ಬಳ್ಳಾರಿ ಶೇಖರ, ಮುಖಂಡರಾದ ಕುರಿ ಹುಸೇನಪ್ಪ, ಕೆ.ಯಮನೂರ್ಪ, ಬಿ.ಕೆ.ದೇವೇಂದ್ರ, ಕೇಧರನಾಥ, ವೆಂಕಟೇಶ, ಮಂಜು, ಬಳ್ಳಾರಿ ಲಕ್ಷ್ಮಣ, ರಾಜಶೇಖರ, ಪೆದ್ದಣ್ಣ, ಜಿ.ವಿರುಪಣ್ಣ, ಸುಣಗಾರ ರಾಘು ಸೇರಿದಂತೆ ಮಹಿಳೆಯರ, ಮಕ್ಕಳು ಹಾಗೂ ಸಮಾಜದವರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 