ಜಯಂತಿಗಳ ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ

ಜಯಂತಿಗಳ ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ Additional District Collector Vijayakumar Honakeri instructs to celebrate Jayantis meaningfully

 ಬೆಳಗಾವಿ, ಡಿ.23: ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನದ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಹಾಗೂ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಗಳನ್ನು ಅರ್ಥಪೂರ್ಣವಾಗಿ  ಆಚರಿಸಲು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ಸೂಚಿಸಿದರು.  

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ (ಡಿ.23) ನಡೆದ ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನದ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಹಾಗೂ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಗಳ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನದ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಡಿಸೆಂಬರ್ 29, 2025 ರಂದು ಹಾಗೂ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜನವರಿ 01, 2026 ರಂದು ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆಚರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ತಿಳಿಸಿದರು.   

ಜಯಂತಿಯ ಆಮಂತ್ರಣ ಪತ್ರಗಳನ್ನು ಶಿಷ್ಟಾಚಾರದನ್ವಯ ಸಾಕಷ್ಟು ಮುಂಚಿತವಾಗಿ ಮುದ್ರಿಸಿ ಗಣ್ಯರುಗಳಿಗೆ  ತಲುಪಿಸಬೇಕು. ರಾಷ್ಟ್ರಕವಿ ಕುವೆಂಪು ಹಾಗೂ ಅಮರ ಶಿಲ್ಪಿ ಜಕಣಾಚಾರಿಗಳ ಬಗ್ಗೆ ಉಪನ್ಯಾಸ ನೀಡಲು ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಲು ಅಪರ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.   ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ಸಮಾಜದ ಗಣ್ಯರು, ಪ್ರಮುಖರು ಉಪಸ್ಥಿತರಿದ್ದರು.