ಬೆಂಗಳೂರು 9: ರಾಜ್ಯದಲ್ಲಿ ತಲೆದೋರಿರುವ ಬರ ನಿರ್ವಹಣೆ ಮಾಡುವಲ್ಲಿ ಸಕರ್ಾರ ಎಲ್ಲಿಯೂ ಎಡವಿಲ್ಲ. ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದು, ರಾಜ್ಯಾದ್ಯಂತ ಬರ ಪ್ರವಾಸ ಮಾಡಿದಂತಹ ಸಂದರ್ಭದಲ್ಲಿ ಎಲ್ಲಿಯೂ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸಮಸ್ಯೆಯಾಗಿರುವುದು ಕಂಡುಬಂದಿಲ್ಲ ಎಂದು ಕಂದಾಯ ಸಚಿವ ಆರ್ವಿ.ದೇಶಪಾಂಡೆ ಹೇಳಿದ್ದಾರೆ.
ರಾಜ್ಯ ಸರಕಾರ ಬರ ಸರಕಾರ ಬರ ಪರಿಹಾರ ನೀಡುವಲ್ಲಿ ವಿಫಲವಾಗಿದೆ. ಕ್ಷೇತ್ರವಾರು ಬರ ಪರಿಸ್ಥಿತಿ ವರದಿ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಕ್ಷದ ಶಾಸಕರಿಗೆ ನಿರ್ದೇ ಶಿಸಿದ್ದೇನೆ ಎಂದು ಆರೋಪಿಸಿದ್ದರು.
ಯಡಿಯೂರಪ್ಪ ಆರೋಪಕ್ಕೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬರಗಾಲಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎರಡು ಬಾರಿ ಜಿಲ್ಲಾಧಿಕಾರಿಗಳು ಹಾಗೂ ಸಿಇಓ ಗಳ ಜೊತೆ ಸಭೆ ಮಾಡಿದ್ದಾರೆ. ಬರ ನಿರ್ವಹಣೆಗಾಗಿ ಪ್ರತಿ ಜಿಲ್ಲಾಧಿಕಾರಿಗಳ ಪಿಡಿಎಫ್ ಖಾತೆಯಲ್ಲಿ 10 ಕೋಟಿ ರೂ.ಹಣವಿದೆ.
ಆ ಕುಡಿಯುವ ನೀರಿನ ಅಭಾವ ಕಂಡುಬಂದಲ್ಲಿ ಅದನ್ನು ಸರಿಪಡಿಸಲಾಗುವುದು. ಈ ಬಗ್ಗೆ ಸಂಪುಟದಲ್ಲಿ ಚಚರ್ಿಸುವುದಾಗಿ ಅವರು ಸ್ಪಷ್ಟಪಡಿಸಿದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎನ್ನುವ ಕಾಂಗ್ರೆಸ್ನ ಒಂದು ಬಣದ ಹೇಳಿಕೆಗೆ ಪ್ರತಿಕ್ರಿಯಿಸಿದ ದೇಶಪಾಂಡೆ, ಕುಮಾರಸ್ವಾಮಿ ಅವರು ಈಗ ಮೈತ್ರಿ ಸರಕಾರದಲ್ಲಿ ಮುಖ್ಯಮಂತ್ರಿಯಾಗಿರುವುದರಿಂದ ಆ ಹುದ್ದೆಗೆ ತಾವು ಆಕಾಂಕ್ಷಿಯಲ್ಲ ಎಂದು ಸಿದ್ದರಾಮಯ್ಯ ಅವರು ಸ್ಪಷ್ಪಡಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಎರಡೂ ಪಕ್ಷಗಳ ಒಪ್ಪಿಗೆಯ ಮೇರೆಗೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾರೆ. ಇಂತಹ ಸಂದರ್ಭ ದಲ್ಲಿ ಮತ್ತೆ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚಚರ್ೆ ಮಾಡುವುದರಿಂದ ವಾತಾವರಣವೇ ಹಾಳಾಗುತ್ತದೆ. ಸಿದ್ದರಾಮಯ್ಯ ಅವರಿಗೆ ಮುಂದೆ ಬೇಕಾದರೆ ಅವಕಾಶ ಸಿಗಬಹುದು ಎಂದರು.