ಕಾಯ್ದೆಗಳ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗಿ
Advancing the protection of children through laws
ಕಾಯ್ದೆಗಳ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗಿ
ಹಿಡಕಲ್ ಡ್ಯಾಂ : ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಅನೇಕ ಕಾನೂನುಗಳಿದ್ದರೂ ಸಹ ಇನ್ನು ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲುತ್ತಿಲ್ಲ, ಕೌಟುಂಬಿಕ ಹಿಂಸೆ ಕಿಶೋರಿಯರ ತಾಯ್ತನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು, ಹೆಚ್ಚು ವರದಿಯಾಗುತ್ತಿವೆ. ಮಹಿಳೆಯರ ಸಾಮಾಜಿಕ, ಆರ್ಥಿಕ, ಮಾನಸಿಕ, ಯೋಚನೆಗಳಿಂದ ರಕ್ಷಿಸಲು ಕಾಯ್ದೆಗಳು ಸಮರ್ಕ ಬಳಕೆ ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮ್ ನಲ್ಲಿ ಜಿಲ್ಲಾ ಪಂಚಾಯತ್ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಶಕ್ತಿ ಸದನ ಯೋಜನೆಯ ಸಹಭಾಗಿತ್ವದಲ್ಲಿ ಹಿಡಕಲ್ ಡ್ಯಾಮ್ ಡಾ. ದುರ್ಗಾಬಾಯಿ ದೇಶಮುಖ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳೆಯರಿಗೆ ಕೇಂದ್ರೀಕೃತವಾದ ಕಾಯ್ದೆಗಳ ಕುರಿತು ಒಂದು ದಿನದ ಕಾರ್ಯಗಾರದಲ್ಲಿ ಮಾತನಾಡಿದರು ಮುಂದುವರೆದು ಕೌಟುಂಬಿಕ ದೌರ್ಜನ್ಯ ಕಾಯ್ದೆ ಬಗ್ಗೆ ವಿವರಿಸಿದ್ದರು.
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಲ್ಪಾ ದೇಸಾಯಿ ಮಾತನಾಡಿ ಶಕ್ತಿ ಸದನ ಸಾಂತ್ವನ ಮಹಿಳಾ ಸಹಾಯವಾಣಿ, ಒನ್ ಸ್ಟಾಪ್ ಸೆಂಟರ್ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ದ್ರಾಕ್ಷಾಯಣಿ ಮಠಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಗಂಧ ಅಲ್ಲಟ್ಟಿ ಸ್ವಾಗತಿಸಿ ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 