ಅಡವಿಸೋಮಾಪೂರ: ವಿಶ್ವ ಕ್ಯಾನ್ಸರ್ ದಿನಾಚರಣೆ

Advisomapura: World Cancer Day

ಅಡವಿಸೋಮಾಪೂರ:  ವಿಶ್ವ ಕ್ಯಾನ್ಸರ್ ದಿನಾಚರಣೆ    

ಗದಗ    05:  ಅಸಾಂಕ್ರಾಮಿಕ ರೋಗಗಳಲ್ಲಿ ಹೃದಯ ಸಂಬಂಧಿತ ಖಾಯಿಲೆಯ ನಂತರದಲ್ಲಿ 2ನೇ ಸ್ಥಾನದಲ್ಲಿ ಕ್ಯಾನ್ಸರ್‌ನಿಂದ ಅತೀ ಹೆಚ್ಚು ಸಾವು ಸಂಭವಿಸುತ್ತಿವೆ. ಕ್ಯಾನ್ಸರ್ ಖಾಯಿಲೆಯು ಅನಿಯಂತ್ರಿತ ಜೀವಕೋಶ ವಿಭಜನೆಗಳಿಂದ ದೇಹದಲ್ಲಿ ಬೆಳವಣಿಗೆಯಾಗುವಂತಹ ಗಡ್ಡೆ. ಕ್ಯಾನ್ಸರ್ ಜೀವಕೋಶವು ಲಿಂಪ್‌ನೋಡ್ಸ ಮುಖಾಂತರ ದೇಹದ ಎಲ್ಲಾ ಭಾಗಗಳಲ್ಲಿ ಪಸರಿಸುತ್ತದೆ. ಕ್ಯಾನ್ಸರ್ ರೋಗದಲ್ಲಿ ನಾಲ್ಕು ಹಂತಗಳಿದ್ದು, ಮೊದಲನೇ ಮತ್ತು ಎರಡನೇ ಹಂತದಲ್ಲಿರುವ ಕ್ಯಾನ್ಸರ್ ರೋಗವನ್ನು ತಜ್ಞ ವೈದ್ಯರಲ್ಲಿ ಚಿಕಿತ್ಸೆ ಪಡೆದರೆ ಸಂಪೂರ್ಣ ಗುಣಪಡಿಸಬಹುದೆಂದು ಆರೋಗ್ಯ ನೀರೀಕ್ಷಣಾಧಿಕಾರಿಗಳಾದ ಶಿದ್ದಪ್ಪ ಎನ್ ಲಿಂಗದಾಳ  ಹೇಳಿದರು  

ಅವರು ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ವಿಭಾಗ, ತಂಬಾಕು ನಿಯಂತ್ರಣಕೋಶ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಲಕ್ಕುಂಡಿ, ಆಯುಷ್ಮಾನ ಆರೋಗ್ಯ ಕೇಂದ್ರ ಅಡವಿಸೋಮಾಪೂರ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಕ್ಯಾನ್ಸರ್ ದಿನದ “ಕ್ಯಾನ್ಸರ್‌” ಕುರಿತು ಅರಿವು ಮೂಡಿಸುವ ಎನ್‌.ಸಿ.ಡಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿಶ್ವ ಕ್ಯಾನ್ಸರ್ ದಿನಾಚರಣೆಯನ್ನು ಪ್ರತಿ ವರ್ಷ ಫೆಬ್ರುವರಿ-4 ರಂದು ಆಚರಿಸಲಾಗುತ್ತಿದ್ದು, ಕ್ಯಾನ್ಸರ್ ಖಾಯಿಲೆಯ ಭೀಕರತೆ ಹಾಗೂ ಸಮಾಜದ ಮೇಲಾಗುವ ಗಂಭೀರ ಪರಿಣಾಮಗಳ ಕ್ಯಾನ್ಸರ್ ಖಾಯಿಲೆಯನ್ನು ಮುನ್ನೆಚ್ಚರಿಕೆ ಮತ್ತು ಆರಂಭಿಕ ಹಂತದಲ್ಲಿ ಪತ್ತೇ ಮಾಡುವುದು ಮುಖ್ಯವಾಗಿದೆ,  ಅಸಾಂಕ್ರಾಮಿಕ ರೋಗಗಳಲ್ಲಿ ಹೃದಯ ಸಂಬಂಧಿತ ಖಾಯಿಲೆಯ ನಂತರದಲ್ಲಿ 2ನೇ ಸ್ಥಾನದಲ್ಲಿ ಕ್ಯಾನ್ಸರ್‌ನಿಂದ ಅತೀ ಹೆಚ್ಚು ಸಾವು ಸಂಭವಿಸುತ್ತಿವೆ ಕ್ಯಾನ್ಸರ್ ಖಾಯಿಲೆಯು ಅನಿಯಂತ್ರಿತ ಜೀವಕೋಶ ವಿಭಜನೆಗಳಿಂದ ದೇಹದಲ್ಲಿ ಬೆಳವಣಿಗೆಯಾಗುವಂತಹ ಗಡ್ಡೆ. ಕ್ಯಾನ್ಸರ್ ಜೀವಕೋಶವು ಲಿಂಪ್‌ನೋಡ್ಸ ಮುಖಾಂತರ ದೇಹದ ಎಲ್ಲಾ ಭಾಗಗಳಲ್ಲಿ ಪಸರಿಸುತ್ತದೆ. ಕ್ಯಾನ್ಸರ್ ರೋಗದಲ್ಲಿ ನಾಲ್ಕು ಹಂತಗಳಿದ್ದು, ಮೊದಲನೇ ಮತ್ತು ಎರಡನೇ ಹಂತದಲ್ಲಿರುವ ಕ್ಯಾನ್ಸರ್ ರೋಗವನ್ನು ತಜ್ಞ ವೈದ್ಯರಲ್ಲಿ ಚಿಕಿತ್ಸೆ ಪಡೆದರೆ ಸಂಪೂರ್ಣ ಗುಣಪಡಿಸಬಹುದೆಂದು ಹೇಳಿದರು . 

ಸಮುದಾಯ ಆರೋಗ್ಯಾ ಅಧಿಕಾರಿಗಳಾದ ಲಕ್ಷ್ಮೀ ಬಿ ಮಾತನಾಡಿ ಈಗಿನ ಆಧುನಿಕ ಜೀವನ ಶೈಲಿ ಮತ್ತು ತಂಬಾಕು ಸೇವನೆಯಿಂದ ಅತೀ ಹೆಚ್ಚು ಕ್ಯಾನ್ಸರ್ ರೋಗಗಳು ಕಂಡುಬರುತ್ತಿವೆ. ಪುರುಷರಲ್ಲಿ ಬಾಯಿ, ಅನ್ನನಾಳ, ಶ್ವಾಸಕೋಶ ಮತ್ತು ಲೀವರ್ ಕ್ಯಾನ್ಸರ್‌ಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಮಹಿಳೆಯರಲ್ಲಿ ಸ್ತನ, ಗರ್ಭಕಂಠ ಮತ್ತು ಅಂಡಾಣುವಿನ ಕ್ಯಾನ್ಸರ್ ಸಾಮಾನ್ಯವಾಗಿ ಕಂಡುಬರುತ್ತವೆ. ಕ್ಯಾನ್ಸರ್ ರೋಗಿಗಳಿಗೆ ಸರಿಯಾದ ಚಿಕಿತ್ಸೆ, ಆರೈಕೆ ಹಾಗೂ ಮನೋಸ್ಥೈರ್ಯ ಮಾತುಗಳಿಂದ ಗುಣಪಡಿಸಬಹುದು. ಉತ್ತಮ ಜೀವನ ಶೈಲಿ, ಸಮತೋಲನ ಆಹಾರ, ತರಕಾರಿ ಹಣ್ಣು ಹಂಪಲಗಳ ಸೇವನೆ, ಪ್ರತಿನಿತ್ಯ ಯೋಗ, ಧ್ಯಾನ ಮತ್ತು ದೈಹಿಕ ಚಟುವಟಿಕೆಯಿಂದ ಕ್ಯಾನ್ಸರ್ ಖಾಯಿಲೆ ಬರದಂತೆ ತಡೆಯಬಹುದೆಂದು ಹೇಳಿದರು  

ಎನ್‌ಸಿಡಿ ಹಾಗೂ ಕ್ಯಾನ್ಸರ್ ಜಾಗತಿಕಾರ್ಯಕ್ರಮದಲ್ಲಿ  ಆಶಾ ಕಾರ್ಯಕರ್ತೆ ಮಾಲಾ ಮೇವುಂಡಿ ರೇಣುಕಾ ಪುರದ ಶಾಂತಾ ಖಾನಾಪೂರ ಮುಂತಾದವರು ಉಪಸ್ಥಿತರಿದ್ದು ಕಾರ್ಯ ನಿರ್ವಹಿಸಿದರು.