ಪರಿಸರ ಸಂರಕ್ಷಣೆಗೆ ಮುಂದಾಗಿ : ನಟ ವಿಶ್ವಪ್ರಕಾಶ ಮಲಗೊಂಡ

Ahead for environmental protection: Actor Vishwaprakash Malagonda

ಪರಿಸರ ಸಂರಕ್ಷಣೆಗೆ ಮುಂದಾಗಿ : ನಟ ವಿಶ್ವಪ್ರಕಾಶ ಮಲಗೊಂಡ

ಸಿಂದಗಿ, 02 : ಪರಿಸರದ ಕಾಳಜಿ ಕೇವಲ ವಾಟ್ಸಪ್ ಸ್ಟೇಟಸ್ ಗೆ ಸೀಮಿತವಾಗಬಾರದು. ಪರಿಸರದ ಉಳಿವಿಗಾಗಿ ಪ್ರತಿಯೊಬ್ಬರು ಒಂದೊಂದು ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರದ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದು ನಟ ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ಹೇಳಿದರು.ರವಿವಾರ ಪಟ್ಟಣದ ಡಾ.ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ  ಯುವ ಸಂಗಮ ಯುವ ಒಕ್ಕೂಟ ಹಾಗೂ ಸಂಗಮ ಸಮಗ್ರ ಗ್ರಾಮಿಣ ಅಭಿವೃದ್ಧಿ ಕೇಂದ್ರ ಜಂಟಿಯಾಗಿ ಹಮ್ಮಿಕೊಂಡಿದ್ದ ವೃಕ್ಷಥಾನ್ ಜಾಥಾದಲ್ಲಿ ಮಾತನಾಡಿದರು. 

ಮರ ಗಿಡಗಳು ಮನುಷ್ಯನಿಗೆ ಶುದ್ಧ ಗಾಳಿ ನೀಡುತ್ತವೆ. ನೆರಳು, ಹಣ್ಣು ನೀಡಿ ನೆರವಾಗುತ್ತಿವೆ. ಆದರೆ ಮನುಷ್ಯ ದುರಾಸೆಯಿಂದ ಪರಿಸರವನ್ನು ಹಾಳುಮಾಡಿ ನಾಶ ಮಾಡುತ್ತಿದ್ದಾನೆ. ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಿ ಎಂದರು.ಸಂಗಮ ಸಂಸ್ಥೆ ಪರಿಸರದ ಕಾಳಜಿ ಜೊತೆಗೆ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ಲಾಘನೀಯ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.ದೇವರಹಿಪ್ಪರಗಿ ಜೆಎಮ್ ಜೆ ನಿರ್ದೇಶಕಿ ಸಿಸ್ಟರ್ ಹೃದಯಾ ಮಾತನಾಡಿ ಪರಿಸರ ನಾಶದಿಂದ ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿದ್ದು, ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಅತ್ಯಂತ ಆಸಕ್ತಿ ವಹಿಸಬೇಕಿದೆ ಎಂದರು.ಈ ವೇಳೆ ಸಂಗಮ ಸಂಸ್ಥೆ ನಿರ್ದೇಶಕ ಫಾ.ಸಂತೋಷ, ಪೊಲೀಸ್ ಹವಾಲ್ದಾರ ವಿ ಪಿ ಜೋಗಿ ಮಾತನಾಡಿದರು. 

ಈ ಸಂದರ್ಭದಲ್ಲಿ ಸಂಗಮ ಸಂಸ್ಥೆ ಸಹ ನಿರ್ದೇಶಕಿ ಸಿಸ್ಟರ್ ಸಿಂತಿಯಾ ಡಿ ಮೆಲ್ಲೊ, ರಾಜೀವ ಕುರಿಮನಿ,  ಫಾ.ಜೀವನ, ಸಂಗಮ ಸಮಗ್ರ ಅಭಿವೃದ್ಧಿ ಕೇಂದ್ರದ ಸಿಬ್ಬಂದಿಗಳು,  ಯುವ ಸಂಗಮ ಯುವ ಒಕ್ಕೂಟದ ಯುವಕರು ವಿದ್ಯಾರ್ಥಿಗಳು, ಪರಿಸರ ಪ್ರೇಮಿಗಳು ಸೇರಿದಂತೆ ಇನ್ನಿತರರು ಇದ್ದರು.