ಕುಡಿಯುವ ನೀರಿನ ಯೋಜನೆ ಪುನಶ್ಚೇತನ ಕಾಮಗಾರಿಗೆ ಐಹೊಳೆ ಚಾಲನೆ
Aihole launches drinking water project revitalization work
ಚಿಕ್ಕೋಡಿ 05: ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಎಲ್ಲಾ ಕುಡಿಯುವ ನೀರಿನ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸಮರ್ಕವಾಗಿ ನೀರು ಪೂರೈಕೆ ಮಾಡಬೇಕು ಎಂದು ರಾಯಬಾಗ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಹೇಳಿದರು.ತಾಲೂಕಿನ ನಾಗರಮುನ್ನೊಳ್ಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗೆ ರೂ. 4.10 ಕೋಟಿ ವೆಚ್ಚದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ನಾಗರಮುನ್ನೊಳ್ಳಿ ಬಹುಗ್ರಾಮ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ ಹಿರಣ್ಯಕೇಶಿ ನದಿಯಲ್ಲಿನ ಜಾಕ್ವೆಲ್ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಬೇಕು. ನದಿಗೆ ನೀರು ಹರಿದು ಬಂದರೆ ಕಾಮಗಾರಿಗೆ ಅನಾನುಕೂಲ ಉಂಟಾಗಬಹುದು.
ಆದ್ದರಿಂದ ಓವರ್ಹೆಡ್ ಟ್ಯಾಂಕ್ ಸೇರಿದಂತೆ ಎಲ್ಲಾ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಜನರಿಗೆ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.ಇದೇ ಸಂದರ್ಭದಲ್ಲಿ ಸಾರ್ವಜನಿಕರ ಮನವಿಯನ್ನು ಪರಿಗಣಿಸಿ ದೊಡ್ಡ ಗ್ರಾಮವಾಗಿರುವ ನಾಗರಮುನ್ನೊಳ್ಳಿಯಲ್ಲಿ ಶೀಘ್ರದಲ್ಲೇ ಆಸ್ಪತ್ರೆ ನಿರ್ಮಿಸುವ ಯೋಜನೆಯೂ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು. ರಾಯಬಾಗ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಆಗದಂತೆ ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗಿದೆ ಎಂದರು.ಮುಖಂಡ ಸಿದ್ದಪ್ಪ ಮರ್ಯಾಯಿ ಮಾತನಾಡಿ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಪುನಶ್ಚೇತನ ಕಾರ್ಯಕ್ರಮಕ್ಕೆ ರೂ. 4.10 ಕೋಟಿ ಮಂಜೂರಾಗಿದೆ.
ಶಾಸಕರು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಜಾಕ್ವೆಲ್ ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ಮಾಡಬೇಕು. ಗ್ರಾಮದಲ್ಲಿ ಈಗ ಸುಮಾರು 13 ಸಾವಿರ ಜನಸಂಖ್ಯೆ ಇರುವುದರಿಂದ ಕನಿಷ್ಠ 2.50 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ ನಿರ್ಮಿಸಬೇಕು. ಆದರೆ ಈಗ 1 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ಗೆ ಮಂಜೂರಾತಿ ದೊರೆತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಸದಾಶಿವ ಘೋರೆ್ಡ, ಸುರೇಶ ಬೆಲ್ಲದ, ಡಾ. ಅರುಣ ಮರ್ಯಾಯಿ, ರಮೇಶ ಕಾಳನ್ನವರ, ಎಂ.ಬಿ. ಆಲೂರೆ, ನಿಜಾಮ ಪೆಂಡಾರೆ, ಎಂ.ಬಿ. ಈಟಿ, ಸಿದ್ದು ಈಟಿ, ಶಿವಪ್ಪ ಕೋಟ್ಯಾಪಗೋಳ, ಗುತ್ತಿಗೆದಾರ ಸತೀಶ ಪಾಟೀಲ, ಬಿ.ಆರ್. ಜಂಬಗಿ (ಎಇಇ), ಮಹಾಂತೇಶ ಹಿಂಗ್ಲಜ (ಶಾಖಾಧಿಕಾರಿ), ಸಿ.ಬಿ. ಅರಭಾವಿ, ದೇವರಾಜ ಪಾಶ್ಚಾಪೂರೆ, ಮಹಾಂತೇಶ ಯಶವಮನತ, ಸಂಭಾ ಚೌವ್ಹಾಣ, ಪ್ರಕಾಶ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 