ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ವಿದ್ಯಾರ್ಥಿಗಳಿಗೆ ಅಲ್ಬೆಂಡಜೋಲ್ ಮಾತ್ರೆ ವಿತರಣೆ
Albendazole tablets distributed to students on National Deworming Day
ಹಾವೇರಿ 10 ; ಅಲ್ಬೆಂಡಜೋಲ್ ಮಾತ್ರೆಯನ್ನು ತೆಗೆದುಕೊಳ್ಳುವುದರಿಂದ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ದೈಹಿಕ -ಮಾನಸಿಕ ಬೆಳವಣಿಗೆ ಕುಂಠಿತವಾಗುವುದನ್ನು ತಡೆಗಟ್ಟಬಹುದು ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಅವರು ಹೇಳಿದರು.
ನಗರದ ಸರ್ಕಾರಿ ಪ್ರಾಥಮಿಕ ಶಾಲೆ ನಂ.03ರಲ್ಲಿ ಮಂಗಳವಾರ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ (ಎನ್.ಡಿ.ಡಿ.) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ 86,456 ಮಕ್ಕಳಿಗೆ ಮಾತ್ರೆ ನೀಡುವ ಗುರಿ ಹೊಂದಲಾಗಿದ್ದು, ಯಾವುದೇ ಮಕ್ಕಳು ಈ ಕಾರ್ಯಕ್ರಮದಿಂದ ಹೊರಗುಳಿಯದಂತೆ ಕ್ರಮವಹಿಸಲಾಗಿದೆ ಎಂದರು.
ಒಂದರಿಂದ 6 ವರ್ಷದ ಮಕ್ಕಳಿಗೆ ಅಂಗನವಾಡಿಗಳಲ್ಲಿ, ಆರರಿಂದ 16 ವರ್ಷದ ಮಕ್ಕಳಿಗೆ ಶಾಲೆಗಳಲ್ಲಿ, 16 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಕಾಲೇಜುಗಳಲ್ಲಿ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿಗಳಲ್ಲಿ ಅಲ್ಬೆಂಡಜೋಲ್ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುತ್ತದೆ. ಎಲ್ಲ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಮಕ್ಕಳಿಗೆ ಊಟದ ಮೊದಲು ಕೈತೊಳೆಯುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಯಿತು.
ಜಿಲ್ಲ್ಲಾ ರೋಗವಾಹಕ ಮತ್ತು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸರಿತಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಹೆಚ್ ಪಾಟೀಲ ಅವರು ಅಲ್ಬೆಂಡಜೋಲ್ ಮಾತ್ರೆಯ ಉಪಯೋಗದ ಕುರಿತು ಮಾತನಾಡಿದರು.
ಮುಖ್ಯೋಪಾಧ್ಯಾಯರಾದ ಪ್ರಭಾವತಿ ಕೊಪ್ಪದ, ಅಧೀಕ್ಷಕ ಎಸ್.ಎಫ್ ಸಾಬಳದ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಎ.ಪಿ.ಪಾಟೀಲ, ಪ್ರಭಾರ ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಪ್ಪ ಕನ್ನಮ್ಮನವರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರೇಖಾ ನಾಯ್ಕ ಇತರರು ಉಪಸ್ಥಿತರಿದ್ದರು. ಶಿವಕುಮಾರ ಎಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 