ಕಾರ್ಮಿಕರ ಹಕ್ಕುಗಳನ್ನು ಉಳಿಸಲಿಕ್ಕೆ ಅಖಿಲ ಭಾರತ ಮುಷ್ಕರ

ಕಾರ್ಮಿಕರ ಹಕ್ಕುಗಳನ್ನು ಉಳಿಸಲಿಕ್ಕೆ ಅಖಿಲ ಭಾರತ ಮುಷ್ಕರ All India strike to protect workers' rights

ಹುಕ್ಕೇರಿ 13 : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕ ವಿರೋಧಿ ನೀತಿಗಳಾಗಿದ್ದು, ಶ್ರಮಪಟ್ಟು ದುಡಿಯುವ ಕಾರ್ಮಿಕರಿಗೆ ಇದುವರೆಗೂ ಸಿಗುತ್ತಿದ್ದ ಸೌಲಭ್ಯಗಳನ್ನು ಕಸಿದುಕೊಳ್ಳುವ ಕೆಲಸ ಮಾಡುತ್ತಿವೆ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ. ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ, ಹೊಸ ಕಾರ್ಮಿಕ ಕಾನೂನುಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಬಸವೇಶ್ವರ ಸರ್ಕಲ್ ಕೋರ್ಟ್‌ ಸರ್ಕಲ್ ನಲ್ಲಿ ಮಾನವ ಸರಿ​‍್ಳ ನಿರ್ಮಿಸಿ ಅಲ್ಲಿಂದ ಮಿನಿ ವಿಧಾನಸೌಧ ಮುತ್ತಿಗೆ ಹಾಕಿ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ರಾದ ಬಲರಾಮ್ ಕಟ್ಟಿಮನಿ ಹಾಗೂ ಸಹಾಯಕ ನಿರ್ದೇಶಕರು ಪಂಚಾಯತ್ ರಾಜ್ ತಾಲೂಕು ಪಂಚಾಯಿತಿ ಅಧಿಕಾರಿಯಾದ ರಾಜು ಡಾಂಗೆ ಇವರು ಮನವಿ ಪತ್ರ ಸ್ವೀಕರಿಸಿ ಮೇಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು ಎಂದು ಹೇಳಿದರು

ಗ್ರಾಮ ಪಂಚಾಯತ್ ನೌಕರರ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸಬೇಕು, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಬೇಕು, ಶಾಶ್ವತ ಉದ್ಯೋಗ ಭದ್ರತೆ ಒದಗಿಸಬೇಕು ಮತ್ತು ಕಾರ್ಮಿಕರ ಹಿತ ಕಾಯುವ ಹಳೆಯ ನೀತಿಗಳನ್ನು ಮರು ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಸಿಐಟಿಯು ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು,“ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು” ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿವೆ. ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂಬ ಸಂದೇಶವನ್ನು ಮುಷ್ಕರದ ಮೂಲಕ ಸಂಘಟನೆಗಳು ಸ್ಪಷ್ಟಪಡಿಸಿವೆ.ಇ ಹೋರಾಟದಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್‌ ಹುಕ್ಕೇರಿ. ಹಾಗೂ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಹಾಗೂ ಬಿಸಿ ಊಟದ ಕಾರ್ಯಕರ್ತರು ದಿನಗೂಲಿ ನೌಕರರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. 


Central Government Labor Code Labor Unions Anti-labor Policies