ಎಲ್ಲಾ ಕುಲಗಳು ಒಂದೇ, ಅದೇ ಮನವ ಕುಲ, ಮಾನವೀತೆಯ ಕುಲ:ಡಾ. ವೀಣಾ ಬಿರಾದಾರ
All clans are the same, they are the same human clan, the clan of humanity: Dr. Veena Biradar
ಧಾರವಾಡ 10 : ನಗರದ ಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಿಸಿಲಾಯಿತು. ಅಧ್ಯಕ್ಷರಾದ ಡಾ. ವೀಣಾ ಬಿರಾದಾರ ದಾಸ ಶ್ರೇಷ್ಠ ಕನಕದಾಸರ ಜಯಂತಿಯ ಕಾರ್ಯಕ್ರಮ ಉದ್ದೇಶಿಸಿ ವಿದ್ಯಾರ್ಥಿಗಳಿಗೆ ಕನಕದಾಸರು ಮೂಲ ಹೆಸರು ತಿಮ್ಮಪ್ಪನಾಯಕ (1508-1606) ಕರ್ನಾಟಕದಲ್ಲಿ 15-16 ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು, ಹೀಗೆ ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ. ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು ಖ್ಯಾತ ಸಂಗೀತಗಾರರಾದ ಶ್ರೀಧರ್ ಕುಲಕರ್ಣಿ, ಸಹಜ ಬದುಕಿನಿಂದ ಕೀರ್ತನಕಾರರಾಗಿ,ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಕನಕದಾಸರು ದಂಡನಾಯಕರಾಗಿದ್ದರು ಎಂದು ವಿದ್ಯಾರ್ಥಿಗಳಿಗೆ ವಿವರಿಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಡಾ. ಎಸ್.ಬಿ. ಗಾಡಿ, ಶ್ರುತಿ ಕುಲಕರ್ಣಿ, ದಂಡಿನ್, ಯಲಿಗಾರ್, ಶಾರದಮ್ಮ ಮತ್ತು ಪ್ರಾಚಾರ್ಯರಾದ ನಾಗರಾಜ ಶಿರೂರ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 