ಜಿಲ್ಲೆಯ ಎಲ್ಲ ಶಿಕ್ಷಕರು ಈ ಬಾರಿ ನಡೆಯುವ ಎಸ್ ಎಸ್ ಎಲ್ ಸಿ ಪರಿಚಯ ಪಲಿತಾಂಶ ಹೆಚ್ಚಿಸಬೇಕು
All teachers in the district should increase the SSLC introduction results this time
ಸವದತ್ತಿ 24: ಜಿಲ್ಲೆಯ ಎಲ್ಲ ಶಿಕ್ಷಕರು ಈ ಬಾರಿ ನಡೆಯುವ ಎಸ್ ಎಸ್ ಎಲ್ ಸಿ ಪರಿಚಯ ಪಲಿತಾಂಶ ಹೆಚ್ಚಿಸಬೇಕು ಆ ನಿಟ್ಟಿನಲ್ಲಿ ನಮ್ಮ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಎಲ್ಲ ಶಾಸಕರು ಬಯಸುವ ಉದ್ದೇಶ ಎಂದರೆ ಎಸ್ ಎಸ್ ಎಲ್ ಸಿ ಪರೀಕ್ಷೆಯು ಉತ್ತಮ ಫಲಿತಾಂಶ ಬಂದು ರಾಜ್ಯದಲ್ಲಿಯೇ ನಮ್ಮ ಜಿಲ್ಲೆಯು ಮಾದರಿಯಾಗಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡಿದ್ದಾರೆ ಅದೇ ರೀತಿಯಾಗಿ ನಮ್ಮ ಇಲಾಖೆಯ ಎಲ್ಲ ಅಧಿಕಾರಿಗಳ ಮುಖ್ಯ ಉದ್ದೇಶವು ಇದೆ ಆಗಿದೆ ಆದ್ದರಿಂದ ಈ ಬಾರಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಕೊಡುವಲ್ಲಿ ಜಿಲ್ಲೆಯ ಎಲ್ಲ ಮುಖ್ಯ ಶಿಕ್ಷಕರು ಬಹಳಷ್ಟು ಶ್ರಮವಹಿಸಿ ಕಾರ್ಯನಿರ್ವಹಿಸಬೇಕು ಎಂದು ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕಿಯರಾದ ಲೀಲಾವತಿ ಹಿರೇಮಠ ಹೇಳಿದರು.
ಅವರು ಸ್ಥಳೀಯ ಬಿಬಿ ಮಮದಾಪುರ ಬಾಲಕಿಯರ ಪ್ರೌಢಶಾಲೆಯ ಸಭಾಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸವದತ್ತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮುಖ್ಯ ಶಿಕ್ಷಕರ ಸಭೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದವರು ನಮ್ಮ ಮೇಲಾಧಿಕಾರಿಗಳ ಐದು ಉದ್ದೇಶ ದಿನಾಂಕದ ಒಳಗಾಗಿ ಪಠ್ಯಕ್ರಮ ಪೂರ್ತಿಗೊಳಿಸುವುದು.ಪಿ ಆರ್ ಎಸ್ ಆಯುಕ್ತರು ಪರೀಕ್ಷಾ ಮಂಡಳಿಯ ಅಧ್ಯಕ್ಷರು ಮಾಡಿದ ವಿಡಿಯೋಗಳನ್ನು ಶಿಕ್ಷಕರು ವೀಕ್ಷಣೆ ಮಾಡಿ ಮಕ್ಕಳಿಗೆ ತೋರಿಸುವುದು.ಮಿಷನ್ 50 ಮಿಷನ್ 40 ಮಿಷನ್ 35 ಗುರಿಮುಟ್ಟುವದು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಪರೀಕ್ಷೆ ಮುಗಿಯುವವರೆಗೂ ಶಾಲೆಯಲ್ಲಿ ಉಳಿಯಬೇಕು ಪ್ರತಿನಿತ್ಯವು ಆ ಮಗು ಶಾಲೆಗೆ ಬರಲೇಬೇಕು.
ಅಂತರದಿಂದ ಅಂಕಗಳನ್ನು ಸರಿಯಾಗಿ ಮೌಲ್ಯಮಾಪನ ಮಾಡಿ ನೀಡುವುದು ನೂರಕ್ಕೆ ನೂರರಷ್ಟು ವಿದ್ಯಾರ್ಥಿಗಳು ಅಂಕ ಪಡೆಯುವಲ್ಲಿ ಎಲ್ಲ ಮುಖ್ಯ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದರು. ನಂತರ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಆರ್. ಸಿ. ರಾಠೋಡ ಅವರು ಮಾತನಾಡಿ ಈ ಬಾರಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ವನ್ನು ನಮ್ಮ ಇಲಾಖೆಯ ಅಧಿಕಾರಿಗಳು ಬಯಸುತ್ತಿದ್ದಾರೆ ಆ ನಿಟ್ಟಿನಲ್ಲಿ ನಮ್ಮ ಶಿಕ್ಷಕರು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಾರೆ. ಆದರೆ ನಮ್ಮ ಶಾಲೆಗೆ ಬರುವ ಮಕ್ಕಳು ಒಂದಲ್ಲ ಒಂದು ರೀತಿಯಿಂದ ತೊಂದರೆ ಅನುಭವಿಸುತ್ತಿರುವ ಮಕ್ಕಳೇ ಬರುತ್ತಾರೆ ಅವರಿಗೆ ನಮ್ಮ ಮುಖ್ಯ ಶಿಕ್ಷಕರು ಶಾಲೆ ಬಿಟ್ಟ ಮಕ್ಕಳ ಮನೆ ಮನೆಗೆ ಹೋಗಿ ಪಾಲಕರಿಗೆ ತಿಳಿ ಹೇಳಿ ಮಕ್ಕಳನ್ನು ಶಾಲೆಗೆ ತಪ್ಪದೆ ಕಳಿಸುವಂತೆ ಮಾಡುವಲ್ಲಿ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ ಅದರ ಜೊತೆಯಾಗಿ ಅವರು ಕೂಡ ಉತ್ತಮ ಫಲಿತಾಂಶ ಕೊಡಿಸುವಲ್ಲಿ ಪ್ರಾಮಾಣಿಕವಾದ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಂತರ ಡಯಟ್ ಆಚಾರ್ಯರಾದ ಅಶೋಕ ಕುಮಾರ್ ಸಿಂದಗಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕಿ ಮೈತ್ರಾದೇವಿ ವಸ್ತ್ರದ ಸಲೀಮ ನದಾಫ, ಸುಧೀರ ವಾಘೇರಿ,ಎ.ಬಿ.ಕಾಮಣ್ಣವರ, ಬಸವರಾಜ ಆಲದಕಟ್ಟಿ, ಶ್ರೀಕಾಂತ ಯರಡ್ಡಿ, ಮುಖ್ಯ ಶಿಕ್ಷಕ ಬಿ.ವಿ.ಚಿಚಗಂಡಿ, ಹಾಗೂ ತಾಲೂಕಿನ ಎಲ್ಲ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಅನುಷ್ಠಾನ ಅಧಿಕಾರಿಗಳು,ತಾಲೂಕಿನ ಎಲ್ಲ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 