ಶಿವಾನಂದ ತಗಡೂರ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರ: ಪತ್ರಕರ್ತರ ಖಂಡನೆ
Allegations against Shivananda Tagaduru far from the truth: Journalists condemn them
ಇಂಡಿ 10: ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರ ವಿರುದ್ಧ ಮಾಡಲಾಗುತ್ತಿರುವ ಆಧಾರರಹಿತ ಆರೋಪಗಳನ್ನು ಖಂಡಿಸಿ ಇಂಡಿಯ ಪತ್ರಕರ್ತರು ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಹಿರಿಯ ಪತ್ರಕರ್ತ ಎ.ಸಿ. ಪಾಟೀಲ ಮಾತನಾಡಿ, ಸತ್ಯಾಸತ್ಯತೆ ಪರೀಶೀಲಿಸದೆ ಆರೋಪ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ಪತ್ರಕರ್ತರ ಹಿತಾಸಕ್ತಿಗಾಗಿ ಶಿವಾನಂದ ತಗಡೂರ ಅವರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ಉಮೇಶ ಕೋಳೇಕರ, ಉಮೇಶ ಬಳಬಟ್ಟಿ, ಖಾಜು ಸಿಂಗೆಗೋಳ ಸೇರಿದಂತೆ ಹಲವರು ಮಾತನಾಡಿ, ಸುಳ್ಳು ಹಾಗೂ ಆಧಾರರಹಿತ ಆರೋಪಗಳಿಂದ ವ್ಯಕ್ತಿತ್ವ ಹರಣ ಮಾಡುವ ಪ್ರಯತ್ನ ಖಂಡನೀಯ. ಇಂತಹ ಆರೋಪಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಯಲಗೊಂಡ ಬೇವನೂರ, ಶರಣು ಕಾಂಬಳೆ, ಶಂಕರ ಜಮಾದಾರ, ಆನಂದ ಗಣಾಚಾರಿ, ಸಚಿನ್ ಇಂಡಿ, ಜೈಭೀಮ ಸಿಂಗೆ, ತುಕಾರಾಮ ಪವಾರ, ಗುರು ದಶವಂತ, ಅಲ್ಲಾಭಕ್ಷ ಗೋರೆ, ಲಾಲಸಿಂಗ ರಾಠೋಡ ಸೇರಿದಂತೆ ಹಲವು ಪತ್ರಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 