ಶಾಲೆಯಲ್ಲಿ ಅಂಬಿಗರ ಚೌಡಯ್ಯ ಜಯಂತೋತ್ಸವ
Ambigar Choudaiya Jayanthotsav in school
ಶಾಲೆಯಲ್ಲಿ ಅಂಬಿಗರ ಚೌಡಯ್ಯ ಜಯಂತೋತ್ಸವ
ಕಂಪ್ಲಿ 22: ಕಂಪ್ಲಿ-ಕೋಟೆಯ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಂತರ ನಿಜಶರಣ ಅಂಬಿಗರ ಚೌಡಯ್ಯನವರು ನೇರ ನುಡಿಯವರಾಗಿದ್ದರು. ಹೀಗಾಗಿಯೇ ಅವರಿಗೆ ನಿಜ ಶರಣ ಅಂತಾ ಬಿರುದು ಬಂದಿದೆ. ಅಂಬಿಗರ ಚೌಡಯ್ಯ ಬಸವಣ್ಣನವರ ಬೆನ್ನುಲುಬಾಗಿದ್ದರು. ಇಂತಹ ಮಹಾನೀಯ ನಿಜ ಶರಣರ ವಚನಗಳು, ತತ್ವಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. 2ನೇ ಶತಮಾನದ ಅನೇಕ ಶರಣರು ತಮ್ಮ ವಚನಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದ್ದಾರೆ. ಈ ಎಲ್ಲಾ ಶರಣರ ವಚನಗಳಲ್ಲಿನೇರವಾಗಿ, ದಿಟ್ಟವಾಗಿ ವಚನಗಳ ಮೂಲಕವೇ ಉತ್ತರಿಸುವ ಸರಳರಲ್ಲಿ ಅತಿ ಸರಳರು ನಿಜಶರಣ ಅಂಬಿಗರ ಚೌಡಯ್ಯ ಎಂದು ಶಾಲಾ ಮುಖ್ಯಗುರು ಬಡಿಗೇರ ಜಿಲಾನಸಾಬ್ ಹೇಳಿದರು. ಇಲ್ಲಿ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿಯರಾದ ಕೆ.ಶ್ವೇತಾ, ಎಂ.ವರ್ಷಾ, ಕೋಲ್ಕರ ಉಮಾ, ಮುಸ್ಕಾನ, ಸುನಿತಾ, ಮಣ್ಣೂರ ಲಕ್ಷ್ಮಿ, ಜೆ.ಅಕ್ಷತಾ, ಗೌಸಿಯ, ಅಕ್ಕಮಹಾದೇವಿ ಸೇರಿದಂತೆ ಪಾಲಕ ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಜ.003: ಕಂಪ್ಲಿ-ಕೋಟೆಯ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಜಯಂತಿ ಆಚರಿಸಲಾಯಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 