ಎಲ್ಲ ಸಂಪತ್ತುಗಳಲ್ಲಿ ಜ್ಞಾನ ಸಂಪತ್ತು ಶ್ರೇಷ್ಠವಾಗಿದೆ: ಬಸವಲಿಂಗ ಶ್ರೀ
Among all wealth, the wealth of knowledge is the greatest: Basavalinga Sri
ವಿಜಯಪುರ, 01 : ಎಲ್ಲ ಸಂಪತ್ತುಗಳಲ್ಲಿ ಜ್ಞಾನ ಸಂಪತ್ತು ಶ್ರೇಷ್ಠವಾಗಿದೆ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ. ಇಂದು ಗುರುವಾರ ನಗರದ ಜ್ಞಾನಯೋಗಾಶ್ರಮದಲ್ಲಿ ಶತಮಾನಂದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ 3ನೇ ಪುಣ್ಯಸ್ಮರಣೆೋತ್ಸವದ ಗುರುನಮನ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಗಾಟಿಸಿ ಅವರು ಮಾತನಾಡಿದರು.
ನಿಯಮಿತ ವ್ಯಾಯಾಮ, ಆಧ್ಯಾತ್ಮ, ಸತ್ವಯುತ ಸಾವಯವ ಆಹಾರ ಸೇವನೆ, ದುಶ್ಚಟಗಳಿಂದ ದೂರವಿರುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಜ್ಞಾನ ದಾಸೋಹದ ಪ್ರವಚನಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಅವರು ಹೇಳಿದರು.ಶಿಬಿರದ ಸಂಚಾಲಕ ಮತ್ತು ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಮಾತನಾಡಿ, ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ಪ್ರತಿವರ್ಷ ಗುರುಪೂರ್ಣಿಮೆಯ ದಿನದಂದು ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗುತ್ತಿತ್ತು. ಈಗ ಶ್ರೀಗಳ ಗುರುನಮನ ಅಂಗವಾಗಿ ಆಯೋಜಿಸಲಾಗಿರುವ ಎರಡು ದಿನಗಳ ಶಿಬಿರದ ಲಾಭ ಪಡೆಯಬೇಕು.
ಈ ಶಿಬಿರದಲ್ಲಿ ತಜ್ಞವೈದ್ಯರು ಆರೋಗ್ಯ ತಪಾಸಣೆ ನಡೆಸಲಿದ್ದು, ರಕ್ತ ಮತ್ತು ಇಸಿಜಿ ತಪಾಸಣೆ ಮಾಡಲಾಗುವುದು. ಅಲ್ಲದೇ, ಉಚಿತವಾಗಿ ಓಷಧಿಯನ್ನು ವಿತರಿಸಲಾಗುವುದು. ಅಲ್ಲದೇ, ಹೆಚ್ಚಿನ ಚಿಕಿತ್ಸೆ ಇರುವ ಪ್ರಕರಣಗಳಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಗೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.ಈ ಶಿಬಿರದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯ ರಕ್ತನಿಧಿಯ ಮುಖ್ಯಸ್ಥ ಡಾ. ಸತೀಶ ಅರಕೇರಿ, ಡಾ. ಭಾಗ್ಯಶಾಲಿ, ಡಾ ವೆಂಕಟೇಶ ಚವ್ಹಾಣ, ಡಾ. ಪ್ರಶಾಂತ ವಾಜಂತ್ರಿ, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಾದ ಡಾ. ಕಿರಣ, ಡಾ. ಗೌರವ, ಡಾ. ವಿಶಾಲ, ಸಹಾಯಕ ಸಿಬ್ಬಂದಿ ಶ್ರೀಶೈಲ ಕುಂಬಾರ, ಸಾವಿತ್ರಿ ಜಂಗಮಶೆಟ್ಟಿ, ಶಶಿಕಾಂತ ಕೋಳಿ, ಅವಿನಾಶ ಮದಭಾವಿ, ದತ್ತಾತ್ರೇಯ, ಸುಹಾಸ ಆರೋಗ್ಯ ತಪಾಸಣೆಯಲ್ಲಿ ಪಾಲ್ಗೋಂಡರು.ಜ್ಞಾನಯೋಗಾಶ್ರಮದ ಭಕ್ತಮಂಡಳಿಯ ಎಂ. ಜಿ. ಹಳ್ಳದ, ರವೀಂದ್ರ ಬಿಜ್ಜರಗಿ, ಆರ್. ಎನ್. ಪಟ್ಟಣಶೆಟ್ಟಿ, ಪ್ರಕಾಶ ಹಿಟ್ನಳ್ಳಿ, ಉಮೇಶ ಶಿವಯೋಗಿಮಠ, ಶಂಕರ ಕವಿಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 