ಸರ್ಕಾರಿ ಹೊರಗುತ್ತಿಗೆ ನೌಕರರ ಭದ್ರತೆಗೆ ರಾಜ್ಯದಲ್ಲಿ ಸಂಘ ಸ್ಥಾಪನೆಯಾಗಿದೆ : ದುರ್ಗೇಶ
An association has been established in the state for the security of government outsourced employee
ಸರ್ಕಾರಿ ಹೊರಗುತ್ತಿಗೆ ನೌಕರರ ಭದ್ರತೆಗೆ ರಾಜ್ಯದಲ್ಲಿ ಸಂಘ ಸ್ಥಾಪನೆಯಾಗಿದೆ : ದುರ್ಗೇಶ
ಬ್ಯಾಡಗಿ 14: ಸರ್ಕಾರಿ ಹೊರಗುತ್ತಿಗೆ ನೌಕರರ ಭದ್ರತೆಗೆ ರಾಜ್ಯದಲ್ಲಿ ಸಂಘ ಸ್ಥಾಪನೆಯಾಗಿದೆ ಎಂದು ಜಿಲ್ಲಾ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಉಪಾಧ್ಯಕ್ಷ ದುರ್ಗೇಶ ವಂದುವಗಲ ತಿಳಿಸಿದ್ದಾರೆ.ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸರ್ಕಾರಿ ಹೊರ ಗುತ್ತಿಗೆದಾರರ ಸಭೆಯಲ್ಲಿ ಹೊರ ಗುತ್ತಿಗೆದಾರರ ಹಿತ ಕಾಪಾಡಲು ಹತ್ತು ಹಲವಾರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಹೊರಗುತ್ತಿಗೆದಾರರಿಗೆ ಸಂಘಗಳನ್ನು ಕಟ್ಟಿ ಹೊರಗುತ್ತಿಗೆದಾರರ ಹಿತ ಕಾಪಾಡಲು ಕಾರ್ಮಿಕ ಇಲಾಖೆ ಅನುಮತಿ ನೀಡಲಾಗಿದೆ.ಇದರಿಂದಾಗಿ ಹೊರಗುತ್ತಿಗೆ ನೌಕರರನ್ನು ಏಜೆನ್ಸಿಗಳು ಮತ್ತು ಮಧ್ಯವರ್ತಿಗಳ ಶೋಷಣೆಯಿಂದ ರಕ್ಷಿಸಲು ನೆರವು ನೀಡಲಿದೆ. ಬೇಡಿಕೆಗೆ ತಕ್ಕಂತೆ ಗುತ್ತಿಗೆ ಕಾರ್ಮಿಕರನ್ನು ಪೂರೈಸುವುದರ ಜತೆಗೆ, ನೌಕರರಿಗೆ ಪಿಎಫ್, ಇಎಸ್‌ಐ, ಸಾಲ ಸೌಲಭ್ಯಗಳನ್ನು ಒದಗಿಸುವುದು ಸಂಘದ ಉದ್ದೇಶವಾಗಿದೆ ಎಂದರು.ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸುಧಾಕರ, ಕಾರ್ಯದರ್ಶಿ ಮುರುಗೇಶ ಸಮ್ಮುಖದಲ್ಲಿ ಹಾವೇರಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.ಜಿಲ್ಲಾ ಸರ್ಕಾರಿ ಹೊರಗುತ್ತಿಗೆ ನೌಕರರ ಜಿಲ್ಲಾಧ್ಯಕ್ಷರಾಗಿ ಗುರುರಾಜ ಕಂಬಳಿ ಪ್ರಧಾನ ಕಾರ್ಯದರ್ಶಿ- ರಾಜು ಪೂಜಾರ ಉಪಾಧ್ಯಕ್ಷರಾಗಿ ದುರಗೇಶ ವಂದುವಗಲ ಮತ್ತು ಕಾವ್ಯ ಬಗಾಡಿ ಜಿಲ್ಲಾ ಕಾರ್ಯದರ್ಶಿಗಳಾಗಿ ಸುರೇಶ ಸಾಗರ ಮತ್ತು ಹನುಮಂತ ಮಾಲೇರ, ಶಿವಲಿಂಗಪ್ಪ ಗೋಕಾವಿಸಂಘಟನಾ ಕಾರ್ಯದರ್ಶಿ ಗಣೇಶ ಮುದುಕಪ್ಪನವರ ಸಹ ಸಂಘಟನೆ ಕಾರ್ಯದರ್ಶಿ- ಹನುಮಂತಪ್ಪ ಬಾಗಲರ ಅವರನ್ನು ನೇಮಿಸಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 