ಜನಮನ ಸೆಳೆದ ಕೃಷಿ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳ ವಸ್ತು ಪ್ರದರ್ಶನ
An exhibition of agricultural technology and machinery that attracted attention
ಜನಮನ ಸೆಳೆದ ಕೃಷಿ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳ ವಸ್ತು ಪ್ರದರ್ಶನ
ಗದಗ 28: ಕೃಷಿ ಇಲಾಖೆ ಹಾಗೂ ಐ.ಸಿ.ಎ.ಆರ್.- ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಹುಲಕೋಟಿ ಸಹಯೋಗದಲ್ಲಿ ಹುಲಕೋಟಿಯ ಶ್ರೀ ಕೈಲಾಸ ಆಶ್ರಮದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೃಷಿ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳ ವಸ್ತು ಪ್ರದರ್ಶನವನ್ನು ರಾಜ್ಯದ ಕಾನೂನು, ನ್ಯಾ0ು ಮತ್ತು ಮಾನವ ಹಕ್ಕುಗಳು, ಸಂಸದೀ0ು ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಉದ್ಘಾಟಿಸಿದರು.
ಬೆಂಗಳೂರಿನ ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾದಿಪತಿಗಳಾದ ಜಗದ್ಗುರು ಜಯೇಂದ್ರಪುರಿ ಮಹಾಸ್ವಾಮಿಗಳು, ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಮಹಾಸ್ವಾಮಿಗಳು ಸಮಾರಂಭದ ಸಾನಿಧ್ಯ ವಹಿಸಿದ್ದರು.
ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರದ ಚೇರಮನ್ ಹಾಗೂ ಮಾಜಿ ಶಾಸಕರಾದ ಡಿ.ಆರ್.ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ, ಗಣ್ಯರಾದ ಸಿದ್ದು ಪಾಟೀಲ, ವಾಸಣ್ಣ ಕುರಡಗಿ, ಹುಲಕೋಟಿ ಅಗ್ರಿಕಲ್ಚರಲ್ ಸೈನ್ಸ್ ಫೌಂಡೇಶನ್ ಉಪಾಧ್ಯಕ್ಷರಾದ ಶಂಕರಗೌಡ ಪಾಟೀಲ, ಅಗ್ರಿಕಲ್ಚರ್ ಸೈನ್ಸ್ ಫೌಂಡೇಶನ್ ನಿರ್ದೇಶಕರಾದ ರವಿ ಮೂಲಿಮನಿ, ಗೌರವ ಕಾರ್ಯದರ್ಶಿಗಳಾದ ಜಿ.ಸಿ.ಕೊರವನವರ, ಹುಲಕೋಟಿ ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ನಾಗರತ್ನ ಬಾಳಿಹಳ್ಳಿಮಠ, ಹುಲಕೋಟಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎ.ಯು. ತಹಶೀಲ್ದಾರ, ಐ.ಸಿ.ಎ.ಆರ್.- ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಸುಧಾ ಮಂಕಣಿ ಅವರುಗಳು ಹಾಜರಿದ್ದರು.
ಹುಲಕೋಟಿಯ ಕೈಲಾಸ ಆಶ್ರಮದಲ್ಲಿ ಕೃಷಿ ಇಲಾಖೆ ಹಾಗೂ ಐ.ಸಿ.ಎ.ಆರ್. ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರದಿಂದ ಕೃಷಿ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ವಸ್ತು ಪ್ರದರ್ಶನದಲ್ಲಿ ವಿವಿಧ ಮಳಿಗೆಗಳು ಸಾರ್ವಜನಿಕರಿಗೆ ಹಾಗೂ ರೈತರಿಗೆ ಉಪಯುಕ್ತವಾದ ಮಾಹಿತಿಯನ್ನು ಬಿಂಬಿಸುತ್ತಿದ್ದವು.
ವಸ್ತು ಪ್ರದರ್ಶನದಲ್ಲಿನ ಮಳಿಗೆಗಳು : ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ತಂತ್ರಜ್ಞಾನ, ನೈಸರ್ಗಿಕ ಕೃಷಿ ತಂತ್ರಜ್ಞಾನ, ಪಶು ಸಂಗೋಪನೆ ತಂತ್ರಜ್ಞಾನ, ಸಿರಿಧಾನ್ಯಗಳು ಹಾಗೂ ಮೌಲ್ಯ ವರ್ಧನೆ, ಸಾವಯವ ಕೃಷಿ ಮಳಿಗೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 