ಅಂಗಡಿ ಇಂಟರನ್ಯಾಷನಲ್ ಸ್ಕೂಲ್ ವಾರ್ಷಿಕ ದಿನಾಚರಣೆ
Angadi International School Annual Day Celebration
ಬೆಳಗಾವಿ 27: ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶಿಸ್ತುಬದ್ಧತೆ ಹಾಗೂ ಎಲ್ಲಾ ಕ್ಷೇತ್ರಗಳಲ್ಲಿ ಶ್ರೇಷ್ಠತೆಯನ್ನು ಸಾಧಿಸುವ ಗುರಿಯನ್ನು ಹೊಂದಬೇಕೆಂದು ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾಣದ ಕಾರ್ಯಧ್ಯಕ್ಷೆ ಹಾಗೂ ಮಾಜಿ ಸಂಸದೆ ಮಂಗಲ ಸುರೇಶ ಅಂಗಡಿ ಕರೆ ನೀಡಿದರು.
ಅವರು ಬುಧವಾರ ದಿ. 24ರಂದು ಬೆಳಗಾವಿಯ ಅಂಗಡಿ ಇಂಟರನ್ಯಾಷನಲ್ ಸ್ಕೂಲಿನ ವಾರ್ಷಿಕೋತ್ಸವವಾದ "ನಯಿ ಸೋಚ್ (ಒಂದು ಹೊಸ ದೃಷ್ಟಿಕೋನ) ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸ್ಕೂಲಿನ ಪ್ರಾಂಶುಪಾಲೆ ಪ್ರೊ. ಸಂಗೀತಾ ದೇಸಾಯಿ ವಾರ್ಷಿಕ ವರದಿಯನ್ನು ಮಂಡಿಸಿದರು.
ವಿದ್ಯಾರ್ಥಿಗಳಿಂದ ನೃತ್ಯ, ಹಾಡುಗಳು, ಕಿರುನಾಟಕಗಳು ಮತ್ತು ವಾದ್ಯ ಸಂಗೀತ ಸೇರಿದಂತೆ ವಿವಿಧ ಸಾಂಸೃತಿಕ ಕಾರ್ಯಕ್ರಮಗಳು ನಡೆದವು. ಶೈಕ್ಷಣಿಕ, ಕ್ರೀಡೆ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ಶ್ರೇಷ್ಟತೆಗಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ನೀಡಲಾಯಿತು.
ಅಂಗಡಿ ಸಂಸ್ಥೆಯ ನಿರ್ದೇಶಕಿ ಡಾ. ಸ್ಪೂರ್ತಿ ಅಂಗಡಿ ಪಾಟೀಲ, ಆಡಳಿತಾಧಿಕಾರಿ ರಾಜು ಜೋಶಿ ಸೇರಿದಂತೆ ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ಸಿಬ್ಬಂದಿ ವರ್ಗದವರು, ಪಾಲಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 