ಪಶು ಸಂಗೋಪನೆ ಉದ್ಯಮಶೀಲತೆ ತರಬೇತಿ ಸಮಾರೋಪ ಸಮಾರಂಭ
Animal Husbandry Entrepreneurship Training Closing Ceremony
ಬೆಳಗಾವಿ 03: ದೇಶದಲ್ಲಿ ಹಾಲು ಉತ್ಪಾದನೆಯು ಸಮರ್ಕವಾಗಿದ್ದು, ಗುಣಮಟ್ಟದ ಹಾಲು ಉತ್ಪಾದನೆ ಇಂದಿನ ಅಗತ್ಯವಾಗಿದೆ. ಜೊತೆಗೆ ಹೈನುಗಾರಿಕೆ ಅಳವಡಿಸಿಕೊಳ್ಳುತ್ತಿರುವ ರೈತರು ಈ ಕ್ಷೇತ್ರದಲ್ಲಿಉತ್ತಮ ಲಾಭಾಂಶ ಪಡೆದು ಕೃಷಿಯ ಜೊತೆಗೆ ಉದ್ಯಮವಾಗಿ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಉತ್ತಮ ಗುಣಮಟ್ಟದ ಹಾಲು ಉತ್ಪಾದನೆ ತಂತ್ರಜ್ಞಾನಗಳನ್ನು ಒಳಗೊಂಡ ಉತ್ತಮ ತರಬೇತಿಯನ್ನು ನೀಡಲಾಗಿದೆ ಎಂದು ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿ ಡಾ. ಎಸ್.ಎಸ್.ಹಿರೇಮಠ ಹೇಳಿದರು.
ಅವರು ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪದಲ್ಲಿ ದಿ. 3ರಂದು ಆಯೋಜಿಸಿದ ರೈತರಿಗೆ ಮೂರು ದಿನಗಳ ಹೈನೋದ್ಯಮ ಹಾಗೂ ಪಶುಸಂಗೋಪನೆಯಲ್ಲಿ ಉದ್ಯಮಶೀಲತೆ ತರಬೇತಿ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಶಿಬಿರಾರ್ಥಿಗಳು ಇದರ ಲಾಭ ಪಡೆದು ಉತ್ತಮ ಉದ್ಯಮಿಯಾಗಬೇಕೆಂದು ಕರೆ ನೀಡಿದರು. ಅತಿಥಿಗಳಾಗಿ ಆಗಮಿಸಿದ ಸಂಪಗಾವದ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಮಹಾಂತೇಶ ಮೇಟಿ ಹಾಗೂ ಮತ್ತಿಕೊಪ್ಪದ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಸುದರ್ಶನ ಗಡಾದ ಇವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಕೇಂದ್ರದ ಮಣ್ಣು ವಿಜ್ಞಾನಿ ಎಸ್.ಎಮ್. ವಾರದ ಇವರು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು, ಪಶು ವಿಜ್ಞಾನ ವಿಭಾಗದ ವಿಜ್ಞಾನಿ ಡಾ. ಗುರುರಾಜ ಕೌಜಲಗಿ ವಂದಿಸಿದರು.
ಕೇಂದ್ರದ ವಿಜ್ಞಾನಿ ಜಿ.ಬಿ.ವಿಶ್ವನಾಥ ಹಾಗೂ ಪಶು ವೈದ್ಯಕೀಯ ಸಹಾಯಕ ವಿನೋದ ಕರಡಿಗುದ್ದಿ ಉಪಸ್ಥಿತರಿದ್ದರು. ಸದರಿ ತರಬೇತಿಯಲ್ಲಿ ಬೆಳಗಾವಿ ಜಿಲ್ಲೆಯ 40 ರೈತರು ಭಾಗವಹಿಸಿ ಕಾರ್ಯಕ್ರಮದ ಲಾಭ ಪಡೆದು ಅಭ್ಯರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 