ಅಂಜುಮನ್ ಶಾದಿ ಮಹಲ್ ಕಾಮಗಾರಿಗೆ ಚಾಲನೆ
Anjuman Shadi Mahal construction work launched
ಕೊಪ್ಪಳ 16 : ಕೊಪ್ಪಳದಲ್ಲಿ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆಯ ಒಂದು ಕೋಟಿ ರೂ. ಅನುದಾನದಲ್ಲಿ ಅಂಜುಮನ್ ಶಾದಿ ಮಹಲ್ ಕಟ್ಟಡ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಶನಿವಾರ ಅಡಿಗಲ್ಲು ನೆರವೇರಿಸಿ ಚಾಲನೆ ನೀಡಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆಯ ಸಚಿವರಾಗಿದ್ದ ಹಾಗೂ ಹಾಲಿ ವಸತಿ ಸಚಿವ ಬಿ. ಜಮೀರ್ ಅಹ್ಮದ್ ಖಾನ್ ಅವರಿಂದ ಮಂಜೂರಾಗಿ ಬಿಡುಗಡೆಯಾದ ಅನುದಾನದಲ್ಲಿ, 80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಕಾಮಗಾರಿಗೆ ಚಾಲನೆ ದೊರೆಯಿತು.
ಈ ವೇಳೆ ಅಂಜುಮನ್ ಕಿದ್ಮತೆ ಮುಸ್ಲಿಮೀನ್ ಸುನ್ನಿ ಆಡಳಿತ ಮಂಡಳಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಸಚಿವ ಶಿವರಾಜ್ ತಂಗಡಗಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದರು. ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.
ಅಲ್ಪಸಂಖ್ಯಾತ ಸಮುದಾಯದ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸರ್ಕಾರದಿಂದ ವಿವಿಧ ಇಲಾಖೆಗಳ ಮೂಲಕ ಅನುದಾನ ಪಡೆಯಲು ಶ್ರಮಿಸುತ್ತಿರುವ ಸಮುದಾಯದ ಮುಖಂಡ ಹಾಗೂ ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್ ಮತ್ತು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರ ಕಾರ್ಯಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಕೆ. ರಾಜಶೇಖರ್ ಹಿಟ್ನಾಳ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಮುಸ್ಲಿಂ ಧರ್ಮಗುರು ಮೌಲಾನಾ ಮುಫ್ತಿ ನಜೀರ್ ಅಹ್ಮದ್ ಖಾದ್ರಿ, ಸಮಾಜದ ಹಿರಿಯ ಮುಖಂಡ ಕೆ.ಎಂ. ಸೈಯದ್, ಅಂಜುಮನ್ ಸಮಿತಿ ಅಧ್ಯಕ್ಷ ಎಂ.ಡಿ. ಆಸಿಫ್, ಕಕ್ಕಿಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 