ಅಣ್ಣಾಸಾಹೇಬ ರಾಚಪ್ಪ ಧುಳಗಾಂವೆ ಅವರಿಗೆ ಪ್ರಧಾನ ಗುರು ಹುದ್ದೆಗೆ ಬಡ್ತಿ

ಅಣ್ಣಾಸಾಹೇಬ ರಾಚಪ್ಪ ಧುಳಗಾಂವೆ ಅವರಿಗೆ ಪ್ರಧಾನ ಗುರು ಹುದ್ದೆಗೆ ಬಡ್ತಿ  Annasaheb Rachappa Dhulagaon was promoted to the post of Principal Guru

ಸಂಬರಗಿ 12 : ಕಳೆದ 32 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಅಣ್ಣಾಸಾಹೇಬ ರಾಚಪ್ಪ ಧುಳಗಾಂವೆ ಅವರಿಗೆ ಅನಂತಪುರ ಪ್ರಾಥಮಿಕ ಶಾಲೆಯ ಪ್ರಧಾನ ಗುರು ಹುದ್ದೆಗೆ ಬಡ್ತಿ ನೀಡಲಾಗಿದೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ಅನಂತಪುರ ಪ್ರಾಥಮಿಕ ಶಾಲೆಗೆ ಅವರನ್ನು ನೇಮಿಸಿ ಅಧಿಕಾರ ವಹಿಸಿಕೊಳ್ಳುವಂತೆ ಆದೇಶಿಸಲಾಗಿದೆ.  

ಈ ಸಂದರ್ಭದಲ್ಲಿ ಮಾತನಾಡಿದ ಧುಳಗಾಂವೆ, ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ನಿಯಮಿತವಾಗಿ ಶಾಲೆಗೆ ಹಾಜರಾಗಬೇಕು ಎಂದು ಹೇಳಿದರು. ಶಿಕ್ಷಕರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ವಿದ್ಯಾರ್ಥಿಗಳ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.  

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುವ ಮೂಲಕ ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಸಹ ಸರ್ಕಾರಿ ಶಾಲೆಗಳತ್ತ ಆಕರ್ಷಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಶಿಕ್ಷಣ ಕ್ಷೇತ್ರದಲ್ಲಿ ದೀರ್ಘಕಾಲದ ಸೇವೆ ಸಲ್ಲಿಸಿರುವ ಧುಳಗಾಂವೆ ಅವರ ಬಡ್ತಿಗೆ ಸಹೋದ್ಯೋಗಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.