ಡಿ.10ಕ್ಕೆ ನೌಕರರ ಸಂಘದ ವಾರ್ಷಿಕ ಮಹಾಸಭೆ
Annual General Meeting of the Employees' Association on December 10th
ಗಂಗಾವತಿ 06 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಗಂಗಾವತಿ ತಾಲೂಕು ಘಟಕದಿಂದ ಇಲ್ಲಿನ ಸರ್ಕಾರಿ ಆಸ್ಪತ್ರೆ ಮೇಲ್ಭಾಗದಲ್ಲಿರುವ ಸಾಂಸ್ಕೃತಿಕ ಭವನದಲ್ಲಿ ಡಿಸೆಂಬರ್ 10 ಬುಧವಾರ ಸಂಜೆ 6:00 ಗಂಟೆಗೆ ತಾಲೂಕು ಅಧ್ಯಕ್ಷ ಶಿವಶಂಕರ ಕಲ್ಮಠ ಇವರ ಅಧ್ಯಕ್ಷತೆಯಲ್ಲಿ ತಾಲೂಕು ನೌಕರರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜರುಗಲಿದೆ ಎಂದು ತಾಲೂಕು ಪ್ರಧಾನ ಕಾರ್ಯದರ್ಶಿ ಶರಣಪ್ಪ ಹಕ್ಕಂಡಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಸಂಘದ ಎಲ್ಲ ಪದಾಧಿಕಾರಿಗಳು, ನಿರ್ದೇಶಕರು, ನಾಮ ನಿರ್ದೇಶಿತರು ಹಾಗು ಸರ್ವ ಸದಸ್ಯರು ತಪ್ಪದೆ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಅವರು ಕೋರಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 