ನ.17ರಂದು ವಾರ್ಷಿಕ ಜಾತ್ರಾ ಮಹೋತ್ಸವ
Annual fair on November 17th
ಉಗರಗೋಳ: ಗ್ರಾಮದ ಗುರು ಶಿವಪ್ಪಯ್ಯ ಶಿವಯೋಗಿಗಳ ಮಠದಲ್ಲಿ ಕಾರ್ತೀಕ ಮಾಸದ ಕೊನೆಯ ಸೋಮವಾರದ ಪ್ರಯುಕ್ತ, ನ.17ರಂದು ವಾರ್ಷಿಕ ಜಾತ್ರಾ ಮಹೋತ್ಸವ ಜರುಗಲಿದೆ. ಬೆಳಿಗ್ಗೆ 6ಕ್ಕೆ ಗುರು ಶಿವಪ್ಪಯ್ಯ ಶಿವಯೋಗಿಗಳ ಗದ್ದುಗೆಗೆ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಅಲಂಕಾರ, ಪೂಜೆ, ಮಹಾಮಂಗಳಾರತಿ ನೆರವೇರಲಿವೆ. 9 ಗಂಟೆಗೆ ಮಠದಿಂದ ಗುರು ಶಿವಪ್ಪಯ್ಯ ಶಿವಯೋಗಿಗಳ ಭಾವಚಿತ್ರದ ಮೆರವಣಿಗೆ, ಪಲ್ಲಕ್ಕಿ ಉತ್ಸವ ಹೊರಡಲಿದ್ದು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ. ಮಧ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ.
ಸಂಜೆ 5.30ಕ್ಕೆ ಧರ್ಮ ಜಾಗೃತಿ ಸಮಾರಂಭ ನಡೆಯಲಿದ್ದು, ಹೂಲಿಯ ಸಾಂಬಯ್ಯನವರಮಠದ ಉಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಉಗರಗೋಳದ ನಿರ್ವಾಣೇಶ್ವರ ಮಠದ ಮಹಾಂತ ಸ್ವಾಮೀಜಿ, ರಾಮಾರೂಢ ಮಠದ ಬ್ರಹ್ಮಾರೂಢ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ವಿಶ್ವಾಸ ವೈದ್ಯ ಉದ್ಘಾಟಿಸುವರು. ಬೆಂಗಳೂರಿನ ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಮಹೇಶ ಹಿರೇಮಠ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಸಿದ್ಧನಗೌಡ ಗೂಢರಾಶಿ, ಸವದತ್ತಿ ಪುರಸಭೆ ಮುಖ್ಯಾಧಿಕಾರಿ ಸಂಗನಬಸಯ್ಯ ಗದಗಿನಮಠ, ಸವದತ್ತಿ ತಾಲೂಕು ಪಂಚಾಯತ ವ್ಯವಸ್ಥಾಪಕ ಮಲ್ಲಿಕಾರ್ಜುನಯ್ಯ ಕಂಬಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಸವದತ್ತಿ ತಾಲೂಕು ಘಟಕದ ಅಧ್ಯಕ್ಷ ಅಲ್ಲಮಪ್ರಭು ಪ್ರಭುನವರ, ಬೆಳಗಾವಿ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ವಿರೂಪಾಕ್ಷಪ್ಪ ಮಾಮನಿ ಆಗಮಿಸುವರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಪುಂಡಲೀಕ ಬಾಳೋಜಿ, ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಮಂಜುನಾಥ ಯಕ್ಕುಂಡಿ, ಧರ್ಮಪ್ಪ ಚಂದರಗಿ, ಜಗದೀಶ ಬೂದಣ್ಣವರ, ಕುಮಾರಿ ವಿಶ್ವನಾಥ ಅಂಗಡಿ ಅವರಿಗೆ ಗುರುರಕ್ಷೆ ಗೌರವ ನೀಡಲಾಗುವುದು. 2024-25ರಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ 90ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಳ್ಳುತ್ತಿದ್ದು, ಸಂಗೀತ ಅಧ್ಯಾಪಕ ಡಾ.ಅರ್ಜುನ ವಠಾರ ಮತ್ತು ಡಾ.ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯ ಕಲಾ ಬಳಗದಿಂದ ವಿವಿಧ ಸಂಗೀತ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 