ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ
Anti-Corruption Awareness Week
ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ
ಗದಗ 27: ಕರ್ನಾಟಕ ಲೋಕಾಯುಕ್ತ ಗದಗ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಇವರುಗಳ ಸಹಯೋಗದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ-2025ನ್ನು ಸೋಮವಾರ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಶ್ರೀ ಬನಪ್ಪ ಸಂಕಪ್ಪ ಸಂಕಣ್ಣವರ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎನ್ ಶಿವನಗೌಡ್ರ ಉದ್ಘಾಟಿಸಿದರು. ಭ್ರಷ್ಟಾಚಾರ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕರು ಯಾವ ಯಾವ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಸಿ.ಎಸ್.ಶಿವನಗೌಡ್ರ ವಿವರಿಸಿದರು. ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಶರಣಬಸಪ್ಪ, ಎಸ್. ಗುಡಿಮನಿ ಅಧ್ಯಕ್ಷತೆ ವಹಿಸಿದ್ದರು.
ಪೊಲೀಸ್ ಉಪಾಧೀಕ್ಷಕ ವಿಜಯ ಬಿರಾದಾರ ಅವರು ಮಾತನಾಡಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹವನ್ನು ಆಚರಿಸುವ ಉದ್ದೇಶವನ್ನು ವಿವರಿಸಿದರು. ಭ್ರಷ್ಟಾಚಾರ ತಡೆಗಟ್ಟದೇ ಹೋದರೆ ಸಮಾಜದ ಪ್ರತಿ ವರ್ಗದ ನಾಗರಿಕರು ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ. ಮುಂದಿನ ಪೀಳಿಗೆಯವರು ಸಮಾಜದಲ್ಲಿ ಮತ್ತು ಸಾರ್ವಜನಿಕ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಲೋಕಾಯುಕ್ತ ಕಚೇರಿಯ ಅಧಿಕಾರಿ ಪರಮೇಶ್ವರ ಜಿ ಕವಟಗಿ, ಶ್ರೀಮತಿ ಎಸ್ ಎಸ್ ತೇಲಿ, ಪೊಲೀಸ್ ಇನ್ಸಪೆಕ್ಟರ್ ಯು.ಎನ್.ಸಂಗನಾಳ, ನೀಲಕಂಠಪ್ಪ ಪಿ ಅಂಬಿಗೇರ, ಮುತರೆಡ್ಡಿ, ಬಾರಡ್ಡಿ , ಮಂಜುನಾಥ ಎಸ್ ದಿಡಗೂರ, ಚನ್ನವೀರ್ಪ ಹುಣಸಿಕಟ್ಟಿ, ಜಯದೇವ ಮೆಣಸಗಿ, ಪ್ರಕಾಶ ಉಗಲಾಟದಿ, ಸಿದ್ರಾಮಪ್ಪ ಉಮಚಗಿ , ರಾಘವೇಂದ್ರ ಕಾಲವಾಡ, ಅಶೋಕ ಎಸ್ ಸಂಕಣ್ಣವರ, ಅರವಿಂದ ಕಾಮತ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 