ಜಲಮೂಲಗಳ ಸಂರಕ್ಷಣೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅಪೆಕ್ಸ್ ಸಮಿತಿ ಸಭೆ
Apex Committee meeting chaired by District Collector for conservation of water bodies
ಜಲಮೂಲಗಳ ಸಂರಕ್ಷಣೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅಪೆಕ್ಸ್ ಸಮಿತಿ ಸಭೆ
ಕೊಪ್ಪಳ 02 :ಜಿಲ್ಲೆಯ ಸಂಬಂಧಿಸಿದ ಇಲಾಖೆಗಳು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವಎಲ್ಲಾ ಜಲಮೂಲಗಳ ಗುರುತಿಸುವಿಕೆ ಮತ್ತುರಕ್ಷಣೆ ಮಾಡಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸುವಂತೆಜಿಲ್ಲಾಧಿಕಾರಿಡಾ. ಸುರೇಶ ಬಿ. ಇಟ್ನಾಳ ಹೇಳಿದರು.ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಕರೆದಜಿಲ್ಲೆಯಲ್ಲಿನ ಕೆರೆಗಳ ಒತ್ತುವರಿತೆರವು, ಕೆರೆಅಭಿವೃದ್ಧಿ ಹಾಗೂ ಕೆರೆಗಳ ಸಂರಕ್ಷಣೆಕುರಿತುಜಿಲ್ಲಾ ಮಟ್ಟದಅಪೆಕ್ಸ್ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಣ್ಣ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಗ್ರಾಮ ಪಂಚಾಯತ್, ಅರಣ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳು ಹಾಗೂ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ ಜಿಲ್ಲೆಯಲ್ಲಿರುವ ಕೆರೆಗಳ ಒತ್ತುವರಿ ತೆರವುಗೊಳಿಸಬೇಕು. ಶೇ.30 ಕ್ಕಿಂತಕಡಿಮೆ ನೀರು ಸಂಗ್ರಹಗೊಂಡಿರುವ ಕೆರೆಗಳ ವಿವರ, ಕೆರೆಗಳ ನೀರಿನಗುಣಮಟ್ಟ ಮತ್ತು ನೀರು ಮಲಿನಗೊಂಡಿರುವ ಕೆರೆಗಳ ವಿವರನ್ನು ಸಹ ಸಲ್ಲಿಸಬೇಕು. ಎಲ್ಲಾ ಕೆರೆಗಳ ಅಭಿವೃದ್ಧಿ ಮತ್ತು ಅವುಗಳ ಸಂರಕ್ಷಣೆಗೆಆದ್ಯತೆ ನೀಡುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ತಮ್ಮಅಧೀನದಲ್ಲಿ ಬರುವಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸಿದ ಬಗ್ಗೆ ಮತ್ತುಕೆರೆಅಭಿವೃದ್ಧಿ ಹಾಗೂ ಕೆರೆಗಳ ಸಂರಕ್ಷಣೆಕುರಿತಾದ ಪ್ರಸ್ತುತದವರೆಗೂ ಸಾಧಿಸಿದ ಪ್ರಗತಿ ವರದಿಯನ್ನುಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸಲ್ಲಿಸುವಂತೆ ಸೂಚನೆ ನೀಡಿದರು.ಜಲಮೂಲಗಳನ್ನು ಗುರುತಿಸಿ, ಅವುಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಿ, ಅಲ್ಲಿಅತಿಕ್ರಮಣತಪ್ಪಿಸಬೇಕು. ಕೆರೆಗಳಲ್ಲಿ ತ್ಯಾಜ್ಯ ವಸ್ತುಗಳನ್ನು ಸುರಿಯುವುದನ್ನುತಡೆಯುವುದು ಹಾಗೂ ಇತರೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ನೀರಿನಗುಣಮಟ್ಟ ಮತ್ತು ಪುನಃ ಸ್ಥಾಪನೆಯನ್ನು ಕಾಪಾಡಿಕೊಳ್ಳಬೇಕು. ಸಂಬಂಧಿಸಿದ ಇಲಾಖೆ, ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳು ಜಲಮೂಲಗಳ ರಕ್ಷಣೆಗೆ ವಿವಿಧ ಮೂಲಗಳಿಂದ ಲಭ್ಯವಿರುವಆರ್ಥಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳಬೇಕು. ಕೆರೆಗಳ ಸಂರಕ್ಷಣೆಗೆಜನ ಸಮುದಾಯಕ್ಕೆಅರಿವು ಮೂಡಿಸುವುದರಜೊತೆಗೆಅವರನ್ನು ಈ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕುಎಂದರು.ಕೆರೆಗಳಲ್ಲಿ ವಾಹನಗಳನ್ನು ತೊಳೆಯುವುದು ಮತ್ತು ಜಾನುವಾರುಗಳ ಮೈ ತೊಳೆಯುವುದನ್ನು ತಡೆಗಟ್ಟಬೇಕು. ಇದಕ್ಕಾಗಿ ಪ್ರತ್ಯೇಕತೊಟ್ಟಿಯನ್ನು ನಿರ್ಮಿಸುವಂತೆಆಯಾಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು. ಎಲ್ಲಿ ನೀರುಕಲುಷಿತವಾಗಿದೆಅದನ್ನು ಗುರುತಿಸಿ, ನೀರು ಶುದ್ಧೀಕರಿಸಲು ಸೂಕ್ತ ಕ್ರಮ ವಹಿಸಬೇಕು. ಪ್ರಸ್ತುತಕೆರೆ ಮತ್ತುಇತರೆ ಜಲಮೂಲಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದ್ದು, ಇದಕ್ಕಾಗಿಅಗತ್ಯ ವ್ಯವಸ್ಥೆ ಮಾಡಿಕೊಡಬೇಕು. ಜಲಮೂಲಗಳಲ್ಲಿ ಯಾವುದೇರೀತಿಯತ್ಯಾಜ್ಯ ವಸ್ತುಗಳನ್ನು ಹಾಕದಂತೆ ನೋಡಿಕೊಳ್ಳಬೇಕೆಂದು ಹೇಳಿದರು.
ಸಭೆಯಲ್ಲಿಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಅಧಿಕಾರಿ ವರ್ಣಿತ್ ನೇಗಿ, ಅಪರಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ನಗರಾಭಿವೃದ್ಧಿಕೋಶದಯೋಜನಾ ನಿರ್ದೇಶಕ ಮಂಜುನಾಥಗುಂಡೂರು, ಜಿ.ಪಂಯೋಜನಾ ನಿರ್ದೇಶಕ ಪ್ರಕಾಶ ವಿ., ಜಂಟಿ ಕೃಷಿ ನಿರ್ದೇಶಕರುದ್ರೇಶಪ್ಪಟಿ.ಎಸ್., ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಪುಷ್ಪಲತಾಎಸ್. ಕವಲೂರು, ಕರ್ನಾಟಕರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಪ್ಪಳ ಪ್ರಾದೇಶಿಕ ಕಛೇರಿಯ ಪರಿಸರಅಧಿಕಾರಿ ವೈ.ಎಸ್. ಹರಿಶಂಕರ ಸೇರಿದಂತೆಇತರೆ ಇಲಾಖೆಗಳ ಅಧಿಕಾರಿಗಳು, ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 