ಮೇಲ್ಮನವಿ ಸಲ್ಲಿಕೆ- ಪರಿಶೀಲನೆ:

ಮಹದಾಯಿ ನ್ಯಾಯಾಧೀಕರಣ ತೀಪರ್ಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಬಗ್ಗೆ ಮೇಲ್ಮನವಿ ಸಲ್ಲಿಸಬೇಕು ಎಂಬುದು ಜನಾಭಿಪ್ರಾಯವಾಗಿದೆ. ಈ ಬಗ್ಗೆ ತಜ್ಞರ ಜತೆ ಚಚರ್ೆ ನಡೆಸಿರುವ ಸಕರ್ಾರ ಮೇಲ್ಮನವಿ ಸಲ್ಲಿಕೆ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. 

ನ್ಯಾಯಾಲಯದ ಬಗ್ಗೆ ನಮಗೆ ಗೌರವವಿದೆ. ನಮ್ಮ ಪಾಲಿನ ನೀರಿನ ಹಕ್ಕಿಗಾಗಿ ಹೋರಾಟ ಮಾಡಲಾಗುವುದು ಎಂದು ಹೇಳಿದರು. 

ಸದ್ಯಕ್ಕೆ ಹೋರಾಟಗಾರರು ಮತ್ತು ಜನರ ಅಭಿಪ್ರಾಯದಂತೆ ನ್ಯಾಯಾಧೀಕರಣ ತೀಪರ್ಿನಂತೆ ನಮ್ಮ ಪಾಲಿನ ನೀರು ಬಳಕೆಗೆ ಸಕರ್ಾರ ಆದ್ಯತೆ ನೀಡಲಾಗುವುದು. ಆ ನಿಟ್ಟಿನಲ್ಲಿ ಸಕರ್ಾರ ತನ್ನ ಸಿದ್ಧತೆ ನಡೆಸಿದೆ ಎಂದು ಸ್ಪಷ್ಟಪಡಿಸಿದರು. 

ಈ ಸಂದರ್ಭದಲ್ಲಿ ಕಳಸಾ-ಬಂಡೂರಿ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದ ಸಚಿವ ಡಿ.ಕೆ.ಶಿವಕುಮಾರ್ ಅವರು, ಯೋಜನೆಯ ಸದ್ಯದ ಸ್ಥಿತಿಗತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. 

ಖಾನಾಪುರ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು, ಹೋರಾಟಗಾರರು ಹಾಗೂ ರೈತ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.