ವಂಚಿತ ಸಮುದಾಯದ ಮಹಿಳೆಯರಿಗೆ ಸರ್ಕಾರದ ಯೋಜನೆ ಸಮರ್ಕವಾಗಿ ಜಾರಿಗೆ ಆಗ್ರಹಿಸಿ ಮನವಿ
Appeal demanding effective implementation of government schemes for women from deprived communities
ಗದಗ-30,: ಗದಗ-ಬೆಟಗೇರಿ ನಗರದಲ್ಲಿ ಸುಮಾರು 80ಕ್ಕೊ ಕೊಳಗೇರಿ ಪ್ರದೇಶಗಳು ಇದ್ದು 40 ಸಾವಿರಕ್ಕೊ ಹೆಚ್ಚು ಸ್ಲಂ ನಿವಾಸಿಗಳು ಕನಿಷ್ಟಮಟ್ಟದ ಸೌಲಭ್ಯಗಳು ಇಲ್ಲದೇ ಬದುಕು ನಡೆಸುತ್ತಿದ್ದಾರೆ. ವಿಶೇಷವಾಗಿ ನಗರದ ಸ್ಲಂ ಪ್ರದೇಶದ ಮಹಿಳೆಯರಿಗೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗದೇ ಯೋಜನೆಗಳಿಂದ ವಂಚಿತರಾಗಿದ್ದಾರೆ. ಕೊಡಲೇ ನಗರದ ವಂಚಿತ ಸಮುದಾಯದ ಮಹಿಳೆಯರಿಗೆ ಸರ್ಕಾರದ ಯೋಜನೆಗಳನ್ನು ಸಮರ್ಕವಾಗಿ ಜಾರಿ ಮಾಡಬೇಕೆಂದು ಆಗ್ರಹಿಸಿ ಗದಗ ಜಿಲ್ಲಾ ಸ್ಲಂ ಮಹಿಳಾ ಸಮಿತಿ ಪದಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಮಹಿಳಾ ಸಮಿತಿ ಅಧ್ಯಕ್ಷರಾದ ಪರವೀನಬಾನು ಹವಾಲ್ದಾರ ಮಾತನಾಡಿ ನಗರದ ಸ್ಲಂ ಪ್ರದೇಶದ ಮಹಿಳೆಯರು ಮನೆಗೆಲಸ, ಟೇಲರಿಂಗ್ ಕೆಲಸ, ಚಿಂದಿ ಆಯುವ ಕೆಲಸ, ಕಟ್ಟಡ ಕಾರ್ಮಿಕರು, ವ್ಯಾಪಾರ ಇನ್ನು ಹಲವಾರು ಶ್ರಮಜೀವಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಸ್ಲಂ ಪ್ರದೇಶದಲ್ಲಿ ಅಸಂಘಟಿತ ಕಾರ್ಮಿಕ ಮಹಿಳೆಯರು ಹೆಚ್ಚು ವಾಸವಾಗಿದ್ದಾರೆ. ವಂಚಿತ ಮಹಿಳೆಯರಿಗೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಅನೇಕ ಬಾರಿ ಇಲಾಖೆಯಲ್ಲಿ ಅರ್ಜಿಗಳನ್ನು ಸಲ್ಲಿಸಿದರು ಸಹ ಅಧಿಕಾರಿಗಳು ಯೋಜನೆಗಳನ್ನು ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಮಹಿಳೆಯರಿಗೆ ಸರ್ಕಾರದ ಯೋಜನೆಗಳನ್ನು ಮಂಜೂರು ಮಾಡಲು ಸಾಕಷ್ಟು ಬಾರಿ ಮನವಿ ನೀಡಿದರು ಸಹ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯಲ್ಲಿ ಸಿಗುವ ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಮಧ್ಯವರ್ತಿಗಳಿಗೆ ಅವಕಾಶ ನೀಡದೇ ನೇರವಾಗಿ ಗದಗ-ಬೆಟಗೇರಿ ಸ್ಲಂ ಪ್ರದೇಶದಲ್ಲಿ ವಾಸವಾಗಿರುವ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಿಗುವಂತೆ ವ್ಯವಸ್ಥೆ ಮಾಡಬೇಕು. ಇಲಾಖೆಯಲ್ಲಿ ಸಿಗುವ ಸರ್ಕಾರದ ವಿವಿಧ ಯೋಜನೆಗಳ ಕುರಿತು ಗದಗ-ಬೆಟಗೇರಿ ನಗರದ ಸ್ಲಂ ಪ್ರದೇಶದಲ್ಲಿ ಮಾಹಿತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ಹೇಳಿದರು.
ಒಂದು ವೇಳೆ ನಮ್ಮ ಮನವಿಗೆ ಅಧಿಕಾರಿಗಳು ಪ್ರಮಾಣಿಕವಾಗಿ ಸ್ಪಂದಿಸಿ ಸ್ಲಂ ಪ್ರದೇಶದಲ್ಲಿ ವಾಸಿಸುತ್ತಿರುವ ಅಸಂಘಟಿತ ಕಾರ್ಮಿಕರಿಗೆ ವಿಶೇಷ ಆದ್ಯತೆ ನೀಡಿ ಯೋಜನೆಗಳನ್ನು ಮಂಜೂರು ಮಾಡದೇ ಇದ್ದಲ್ಲಿ ಗದಗ ಜಿಲ್ಲಾ ಸ್ಲಂ ಮಹಿಳಾ ಸಮಿತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಕಚೇರಿ ಮುಂದೆ ಅನ್ಯಾಯಕ್ಕೆ ಒಳಗಾದ ಸಾವಿರಾರು ಮಹಿಳೆಯರೊಂದಿಗೆ ಪ್ರತಿಭಟನೆ ನಡೆಸಲಾಗುವುದೆಂದು ಮನವಿ ಮೂಲಕ ಎಚ್ಚರಿಸಲಾಗಿದೆ. ಇಲಾಖೆಯ ಉಪನಿರ್ದೇಶಕರು ಮನವಿ ಸ್ವಿಕರಿಸಿ ಮಾತನಾಡಿ ಇಲಾಖೆಯಿಂದ ನೀಡಲಾಗುವ ಸರ್ಕಾರದ ಯೋಜನೆಗಳ ಕುರಿತು ಸಂಘಟನೆಯ ಸಹಕಾರದಲ್ಲಿ ಸ್ಲಂಗಳಲ್ಲಿ ಮಾಹಿತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.
ಯಾರು ಮಧ್ಯವರ್ತಿಗಳಿಗೆ ಅವಕಾಶ ನೀಡದೇ ಫಲಾನುಭವಿಗಳು ನೇರವಾಗಿ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಬೇಕೆಂದು ಹೇಳಿದರು, ಮನವಿ ನೀಡುವ ಸಂದರ್ಭದಲ್ಲಿ ಮಹಿಳಾ ಸಮಿತಿ ಉಪಾಧ್ಯಕ್ಷ ವಿಶಾಲಕ್ಷಿ ಹಿರೇಗೌಡ್ರ, ಮೆಹರುನಿಸಾ ಡಂಬಳ, ಕಾರ್ಯದರ್ಶಿ ಫೈರುಜಾ ಗುಳಗುಂದಿ, ಸಹ ಕಾರ್ಯದರ್ಶಿ ರೂಪಾ ಕಬಾಡಿ, ಮೈಮುನ ಬೈರಕದಾರ, ನಜಮುನಿಸಾ ಮುರಗೋಡ, ಪ್ರೇಮಾ ಮಣ್ಣವಡ್ಡರ, ಸಾಕ್ರುಬಾಯಿ ಗೋಸಾವಿ, ಗಿರಜವ್ವ ವಡ್ಡಟಿ, ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ.ಆರ್.ಮಾನ್ವಿ, ಕಾರ್ಯದರ್ಶಿ ಅಶೋಕ ಕುಸಬಿ, ಮುಖಂಡರಾದ ಶರಣಪ್ಪ ಸೂಡಿ, ಸಲೀಂ ಹರಿಹರ, ಗೌಸಸಾಬ ಅಕ್ಕಿ ಹಾಗೂ ಗದಗ-ಬೆಟಗೇರಿ ನಗರದ ವಿವಿಧ ಸ್ಲಂ ಪ್ರದೇಶದ ನೂರಾರು ಮಹಿಳೆಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 