ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗ್ರಾಜ್ಯೂಟಿ ಜಾರಿಗೊಳಿಸಲು ಆಗ್ರಹಿಸಿ ಮನವಿ
Appeal demanding implementation of gratuity for Anganwadi workers and helpers
ಬೆಳಗಾವಿ 06: ಸುಪ್ರೀಂ ಕೋರ್ಟ್‌ನ ತೀರ್ಿನ ಪ್ರಕಾರ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗ್ರಾಜ್ಯೂಟಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ, ಎಐಟಿಯುಸಿ ವತಿಯಿಂದ ಗುರುವಾರ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಸುಪ್ರೀಂ ಕೋರ್ಟ್‌ನ ತೀರ್ಿನ ಪ್ರಕಾರ ಸೇವೆಗೆ ಸೇರಿ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗ್ರಾಜ್ಯೂಟಿಯನ್ನು ಪಾವತಿಸಬೇಕು. ಪ್ರಸ್ತುತ ರಾಜ್ಯ ಸರಕಾರವು ಗ್ರಾಜ್ಯೂಟಿ ಜಾರಿಗೊಳಿಸಿದೆ. ಆದರೆ 2023 ರಿಂದ ನಿವೃತರಾದವರನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗಿದೆ. 2011-12 ನೇ ಸಾಲಿನಿಂದ ನಿವೃತರಾದವರನ್ನು ಪರಿಗಣಿಸಬೇಕು. ಆದ್ದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಂಗನವಾಡಿ ಸೇವೆಗೆ ಸೇರಿ 2011-12ನೇ ಸಾಲಿನಿಂದ ನಿವೃತ್ತರಾದ ಎಲ್ಲರಿಗೂ ಗ್ರಾಜ್ಯೂಟಿ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಜೊತೆಗೆ ರಾಜ್ಯ ಸರಕಾರ ಜಿಲ್ಲೆಯಲ್ಲಿ ಸಾಮಾಜಿಕ ಶೈಕ್ಷಣಿಕ ಸರ್ವೇಗೆ ಮೊದಲು ಶಾಲಾ ಶಿಕ್ಷಕರನ್ನು ನಿಯೋಜಿಸಿತ್ತು. ಅವರಿಗೆ ರಜೆಯೊಂದಿಗೆ ಸರ್ವೆ ಕಾರ್ಯ ನಿರ್ವಹಿಸಿದಕ್ಕೆ ಪ್ರೋತ್ಸಾಹ ಧನವನ್ನು ನೀಡಿದ್ದರು. ಪ್ರಸ್ತುತ ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ವೇಗೆ ಕಾರ್ಯಕ್ಕೆ ನಿಯೋಜಿಸುವಂತೆ ಜಿಲ್ಲಾಧಿಕಾರಿ ಮೌಖಿತವಾಗಿ ಆದೇಶಿಸಿದ್ದರು. ಆದೇಶ ಪಾಲಿಸಿ ಸರ್ವೇ ಕಾರ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಎಐಟಿಯುಸಿ ಜಿಲ್ಲಾಧ್ಯಕ್ಷ ನಾಗೇಶ ಸಾತೇರಿ, ಉಪಾಧ್ಯಕ್ಷೆ ವೈ.ಬಿ.ಶಿಗಿಹಳ್ಳಿ, ಮಿನಾಕ್ಷಿ ಕೊಟಗಿ, ಚಿನ್ನಕ್ಕಾ ಹುಲಕವಿ, ಮಂಗಲ ಪಾಟೀಲ, ಸವಿತಾ ಡಿಗ್ರೆ ಸೇರಿದಂತೆ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 