ಆದಿವಾಸಿ ಮತ್ತು ಅಲೆಮಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ, ಮನವಿ
Appeal demanding provision of basic facilities to tribals and nomads
ಆದಿವಾಸಿ ಮತ್ತು ಅಲೆಮಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ, ಮನವಿ
ಕಂಪ್ಲಿ 11: ಆದಿವಾಸಿ ಮತ್ತು ಅಲೆಮಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ, ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಕಂಪ್ಲಿ ತಾಲೂಕು ಘಟಕದಿಂದ ರಾಜ್ಯ ಉಪಾಧ್ಯಕ್ಷ ಜಿ.ಮಾಧವರಾಜ ಅವರ ಸಮ್ಮುಖದಲ್ಲಿ ಪಟ್ಟಣದ ತಹಶೀಲ್ದಾರ್ ಜೂಗಲ್ ಮಂಜುನಾಥ ಇವರಿಗೆ ಸೋಮವಾರ ಮನವಿ ಪತ್ರ ಸಲ್ಲಿಸುವ ಮೂಲಕ 31ನೇ ವಿಶ್ವ ಆದಿವಾಸಿ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಯಿತು. ನಂತರ ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಚ್.ಪಿ.ಶಿಕಾರಿ ರಾಮು ಮಾತನಾಡಿ, ವಿಶ್ವ ಆದಿವಾಸಿಗಳು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು 1994ರ ಡಿಸೆಂಬರ್ 23ರಂದು ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಗಂಭೀರವಾಗಿ ಚರ್ಚಿಸಿ, ಚಿಂತಿಸಿ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಆದಿವಾಸಿಗಳ ಸಂಸ್ಕೃತಿ, ಶಿಕ್ಷಣ, ಆರೋಗ್ಯ, ಪರಿಸರ, ಮಾನವ ಹಕ್ಕುಗಳ ಸಂರಕ್ಷಣೆ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಪರೀಶೀಲನೆ ಮತ್ತು ನೆನಪಿಸುವ ಸಲುವಾಗಿ 1995ರ ಆಗಸ್ಟ್ 9ರ ದಿನವನ್ನು ವಿಶ್ವ ಆದಿವಾಸಿ ದಿನಾಚರಣೆಯನ್ನಾಗಿ ಆಚರಿಸಲಾಯಿತು.
ಆದಿವಾಸಿಗಳ ಕೇಂದ್ರಿತ ಉನ್ನತ ಮತ್ತು ಸಮಗ್ರ ಅಧ್ಯಯನಕ್ಕಾಗಿ ರಾಜ್ಯ/ಕೇಂದ್ರ ಸರ್ಕಾರ ಬುಡಕಟ್ಟು ವಿಶ್ವವಿದ್ಯಾಲಯವನ್ನು ಕರ್ನಾಟಕದ ಪಶ್ಚಿಮಘಟ್ಟ ಪ್ರದೇಶದ ಜಿಲ್ಲೆಯೊಂದರಲ್ಲಿ ಆರಂಭಿಸಬೇಕು. ಜಾತಿ ಪ್ರಮಾಣ ಪತ್ರ ನೀಡಬೇಕು. ಆದಿವಾಸಿ ಮಕ್ಕಳಿಗೆ ವಸತಿ ಶಾಲೆಯಲ್ಲಿ ನೇರ ನೇಮಕಾತಿ ಮಾಡಬೇಕು. ಭೂರಹಿತರಿಗೆ ಭೂಮಿ ಮಂಜೂರು ಮಾಡಬೇಕು. ಆದಿವಾಸಿ ಕಾಲೋನಿಯಲ್ಲಿ ಸಮುದಾಯ ಭವನ ಮಂಜೂರು ಮಾಡಬೇಕು. ವಲಸೆ ಹೋಗುತ್ತಿರುವ ಬುಡಕಟ್ಟು ಪರಿಪರಿತ ಕಲೆ ವಿಮೆಗೆ ಗೀಡ, ನೇರ ಲೆಕ್ಕಗಳ ಸಗ್ರಹ ಮತ್ತು ಅವುಗಳನ್ನು ಬೆಳೆಸಿಕೊಂಡು ಹೋಗಲು ಅನುಕೂಲ ಮಾಡಿಕೊಡಬೇಕು. ಆದಿವಾಸಿ ಮಕ್ಕಳು ವಿದ್ಯಾಭ್ಯಾಸ ಮಾಡುವ ಪ್ರಾಥಮಿಕ ಶಿಕ್ಷಣ ಆದಿವಾಸಿ ವಿದ್ಯಾವಂತರಿಗೆ ಗೌರವ ಶಿಕ್ಷಣಕ್ಕಾಗಿ ನೇಮಕ ಮಾಡಬೇಕು. ಹೀಗೆ ಆದಿವಾಸಿ ಮತ್ತು ಅಲೆಮಾರಿಗಳ ಬಹು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಹಕ್ಕಿಪಿಕ್ಕಿ ಫಾರ್ದಿ ಅರಣಾ ಶಿಕಾರಿ ಮಹಿಳಾ ಅಭಿವೃದ್ಧಿ ಸಂಘದ ಅಧ್ಯಕ್ಷೆ ಜಾನಕಿ, ಸುಡಗಾಡು ಸಿದ್ದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಣ್ಣ ಹುಲುಗಪ್ಪ, ಮುಖಂಡರಾದ ರಾಹುಲ್ ನಾಗಪ್ಪ, ಹರಿಕೃಷ್ಣ, ಗಾಳಿಕುಮಾರ, ಜೆ.ಮಾರೆಪ್ಪ, ಆರ್.ಶಿವುಕುಮಾರ, ಹೆಚ್.ಪಿ.ಈರಣ್ಣ, ಬಾಲಚಂದ್ರ, ಶಿಕಾರಿಬಾಬು, ಮಹಾದೇವಿ, ದುರ್ಗಮ್ಮ, ನೀಲಮ್ಮ, ಸುಶೀಲಮ್ಮ, ಗಂಗಮ್ಮ, ಗೀತಾ ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 