ಸ್ಲಂ ಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಲು ಸಂಸದರಿಗೆ ಮನವಿ
Appeal to MPs to allocate funds for the construction of slum houses
ಗದಗ 07: ಗದಗ ಜಿಲ್ಲಾ ಸ್ಲಂ ಸಮಿತಿಗೆ ಹಂಚಿಕೆ ಮಾಡಲಾಗಿರುವ ನಿವೇಶದನಲ್ಲಿ ಸ್ಲಂ ಭವನ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಬೇಕೆಂದು ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಗದಗ ನಗರಕ್ಕೆ ಭೇಟಿ ನೀಡಿದ ಹಾವೇರಿ-ಗದಗ ಕ್ಷೇತ್ರದ ಸಂಸದರಾಗಿರುವ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೋಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗಿದೆ.
ಗದಗ-ಬೆಟಗೇರಿ ನಗರದಲ್ಲಿ 80ಕ್ಕೊ ಹೆಚ್ಚು ಸ್ಲಂ ಪ್ರದೇಶಗಳು ಇದ್ದು, ಇದರಲ್ಲಿ ಸಾವಿರಾರು ಕುಟುಂಬಗಳು ಸುಮಾರು ದಶಕಗಳಿಂದ ವಾಸವಾಗಿದ್ದಾರೆ. ಕೊಳಗೇರಿ ಪ್ರದೇಶಗಳಲ್ಲಿ ವಿವಿಧ ಅಭಿವೃಧ್ದಿ ಕಾಮಗಾರಿಗಳನ್ನು ನಡೆಸಲು ಅನುದಾನ ನೀಡುವ ಜೊತೆಗೆ ನಗರದ ಸ್ಲಂ ನಿವಾಸಿಗಳ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಸಂಸದರ ಕ್ಷೇತ್ರ ಅಭಿವೃಧ್ದಿ ಅನುದಾನದಲ್ಲಿ ಸ್ಲಂ ಭವನ ನಿರ್ಮಾಣಕ್ಕಾಗಿ ಅನುದಾನ ಮಂಜೂರು ಮಾಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ. ಮನವಿಗೆ ಸ್ಪಂದಿಸಿ ಮಾತನಾಡಿದ ಸಂಸದರಾದ ಬಸವರಾಜ ಬೋಮ್ಮಾಯಿ ಅವರು ಮುಂಬರುವ ಮಾರ್ಚ ತಿಂಗಳಲ್ಲಿ ಬಿಡುಗಡೆ ಆಗುವ ಸಂಸದರ ಕ್ಷೇತ್ರದ ಅಭಿವೃಧ್ದಿ ಅನುದಾನದಲ್ಲಿ ಸ್ಲಂ ಭವನ ನಿರ್ಮಾಣಕ್ಕಾಗಿ ಆದ್ಯತೆ ನೀಡಲಾಗುವುದೆಂದು ಹೇಳಿದರು.
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರಾದ ಇಮ್ತಿಯಾಜ.ಆರ್.ಮಾನ್ವಿ, ಉಪಾಧ್ಯಕ್ಷರಾದ ಅಶೋಕ ಕುಡತಿನ್ನಿ, ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮುಖಂಡೆರಾದ ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಶರಣಪ್ಪ ಸೂಡಿ, ಮೆಹಬೂಬಸಾಬ ಬಳ್ಳಾರಿ, ಮೆಹರುನಿಸಾ ಡಂಬಳ, ಮೈಮುನ ಬೈರಕದಾರ, ಸಲೀಂ ಹರಿಹರ, ಮಂಜುನಾಥ ಶ್ರೀಗಿರಿ, ಖಾಜಾಸಾಬ ಇಸ್ಮಾಯಿಲನವರ, ಸಾಕ್ರುಬಾಯಿ ಗೋಸಾವಿ, ಪ್ರೇಮಾ ಮಣ್ಣವಡರ, ಗೌಸಸಾಬ ಅಕ್ಕಿ, ದಾದು ಗೋಸಾವಿ ಹಾಗೂ ನೂರಾರು ಸ್ಲಂ ನಿವಾಸಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 