ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಹಲವು ನ್ಯಾಯಯುತ ಬೇಡಿಕೆಗೆ ಆಗ್ರಹಿಸಿ ಶ್ರೀನಿವಾಸ ಮಾನೆ ಅವರಿಗೆ ಮನವಿ

ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಹಲವು ನ್ಯಾಯಯುತ ಬೇಡಿಕೆಗೆ ಆಗ್ರಹಿಸಿ ಶ್ರೀನಿವಾಸ ಮಾನೆ ಅವರಿಗೆ ಮನವಿ Appeal to Srinivas Mane, demanding several just demands including filling of vacant posts


      ಹಾನಗಲ್ 10 :ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಹಲವು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಗಮನ ಸೆಳೆಯುವಂತೆ ಆಗ್ರಹಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇಲ್ಲಿ ಶಾಸಕ ಶ್ರೀನಿವಾಸ ಮಾನೆ ಅವರಿಗೆ ಮನವಿ ಸಲ್ಲಿಸಿದರು. 

     ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಯಾಗದೇ ಇರುವುದರಿಂದ ಆರೋಗ್ಯ ಸೇವೆ ದೊರಕಿಸುವುದು ಸವಾಲಿನಿಂದ ಕೂಡಿದೆ. ಹಾಗಾಗಿ ಹುದ್ದೆಗಳ ಭರ್ತಿಯಾಗಬೇಕು. ಎಲ್ಲ ಆಸ್ಪತ್ರೆಗಳಿಗೆ ಸಮರ​‍್ಕವಾಗಿ ಓಷಧಿಗಳು ಪೂರೈಕೆಯಾಗಬೇಕು. ವೃಂದ ಮತ್ತು ನೇಮಕಾತಿ ತಿದ್ದುಪಡಿಯಾಗಬೇಕು. ಎಲ್ಲ ವೃಂದಗಳ ಜೇಷ್ಠತಾ ಪಟ್ಟಿ ಕಾಲಕಾಲಕ್ಕೆ ಪ್ರಕಟಿಸಬೇಕು. ಅಧಿಕಾರಿಗಳು ಮತ್ತು ನೌಕರರಿಗೆ ಮುಂಬಡ್ತಿ ನೀಡಬೇಕು. ಸೇವಾನಿರತ ವೈದ್ಯರು, ಅಧಿಕಾರಿಗಳು, ನೌಕರರ ಉನ್ನತ ವ್ಯಾಸಾಂಗಕ್ಕೆ ಅವಕಾಶ ಒದಗಿಸಬೇಕು. ವರ್ಗಾವಣೆಯಲ್ಲಿನ ನ್ಯೂನ್ಯತೆ ಸರಿಪಡಿಸಬೇಕು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ವಿವರಿಸಲಾಗಿದೆ. ಮನವಿಗೆ ಸ್ಪಂದಿಸಿದ ಶಾಸಕ ಮಾನೆ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಭರವಸೆ ನೀಡಿದರು. 

      ತಾಲೂಕಾ ಆರೋಗ್ಯಾಧಿಕಾರಿ ಡಾ.ಲಿಂಗರಾಜ್ ಕೆ.ಜಿ., ಕರ್ನಾಟಕ ರಾಜ್ಯ ನೌಕರರ ಸಂಘದ ತಾಲೂಕಾಧ್ಯಕ್ಷ ಗುರುನಾಥ ಗವಾಣಿಕರ, ಆಡಳಿತ ವೈದ್ಯಾಧಿಕಾರಿಗಳಾದ ಡಾ.ಅಖಿಲೇಷ ಮಾಳೋದೆ, ಡಾ.ಗಗನ ಮಾಳೋದೆ, ಬಸವರಾಜ್ ದಿಡಗೂರ, ಡಾ.ಶಿವಕುಮಾರ ಶಿವೂರ, ಗೋಪಿಕೃಷ್ಣ ನಾಯ್ಕರ, ಪ್ರಕಾಶ ನಾಗರಹಳ್ಳಿ, ಜ್ಯೋತಿ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.